ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಯರ್ ಚುನಾವಣೆಗೆ ಸಂಸದರು ಏಕೆ ಮತ ಹಾಕಬೇಕು?

|
Google Oneindia Kannada News

ಬೆಂಗಳೂರು, ಸೆ. 02 : ಬಿಬಿಎಂಪಿ ಮೇಯರ್ ಆಯ್ಕೆಯ ಚುನಾವಣೆಯಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಮತದಾನದ ಹಕ್ಕು ನೀಡಬಾರದು ಎಂದು ಬಿಜೆಪಿಯ ಪಾಲಿಕೆ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್ ಸೆ.8ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಬಿಜೆಪಿಯ ಪಾಲಿಕೆ ಸದಸ್ಯರಾದ ಎಂ. ಪ್ರಮೀಳಾ, ಆರ್‌.ಪ್ರತಿಮಾ, ದೀಪಾ ನಾಗೇಶ್‌, ಉಮಾವತಿ ಪದ್ಮರಾಜ್‌, ಕುಮಾರಿ ಪಳನಿಕಾಂತ್‌ ಅವರು ಈ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಂಗಳವಾರ ನ್ಯಾಯಮೂರ್ತಿ ಆರ್‌.ಎಸ್‌. ಚೌಹಾಣ್‌ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆಯನ್ನು ನಡೆಸಿದೆ. [ಮೇಯರ್ ಚುನಾವಣೆ ಮ್ಯಾಜಿಕ್ ನಂ 131]

bbmp

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪ ಮೇಯರ್‌ ಹುದ್ದೆಯ ಚುನಾವಣೆಯಲ್ಲಿ ಲೋಕಸಭಾ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್ ನಾಮಕರಣ ಸದಸ್ಯರಿಗೆ ಮತದಾನ ಮಾಡಲು ಅವಕಾಶ ನೀಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. [ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಆಡಳಿತ]

ಅರ್ಜಿದಾರರ ಪರವಾಗಿ ವಾದ ಮಂಡನೆ ಮಾಡಿದ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರು, 'ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆಯಲ್ಲಿ ಕರ್ನಾಟಕ ಮಹಾನಗರಪಾಲಿಕೆ ಕಾಯ್ದೆ 1976ರ ಅನುಸಾರ 62 ಜನಪ್ರತಿನಿಧಿಗಳಿಗೆ ಮತದಾನದ ಅವಕಾಶ ನೀಡಿರುವುದು ಸಂವಿಧಾನ ಬಾಹಿರವಾದದ್ದು'ಎಂದು ವಾದ ಮಂಡಿಸಿದರು. [ಮೇಯರ್ ಮತದಾನದ ಹಕ್ಕು ಪ್ರಶ್ನಿಸಿದ ಬಿಜೆಪಿ]

ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೊಕೇಟ್‌ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಅವರು, '22 ವರ್ಷಗಳ ಹಿಂದೆಯೇ ಈ ಕುರಿತು ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಈತನಕ ಯಾವುದೇ ತಕರಾರಿಲ್ಲ. ಸಂವಿಧಾನಬದ್ಧವಾಗಿಯೇ ಮತದಾನದ ಹಕ್ಕು ನೀಡಲಾಗಿದೆ. ಈ ಅರ್ಜಿ ರಾಜಕೀಯ ಪ್ರೇರಿತವಾದದ್ದು' ಎಂದು ವಾದ ಮಂಡನೆ ಮಾಡಿದರು.

'ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಜನಪ್ರತಿನಿಧಿಗಳಿಗೆ ಅವಕಾಶ ನೀಡಿಲ್ಲ. ಆದರೆ, ಮಹಾನಗರಪಾಲಿಕೆಗಳಿಗೆ ನೀಡಿರುವುದು ಎಷ್ಟು ಸರಿ? ಎಂದು ಅಶೋಕ್ ಹಾರನಹಳ್ಳಿ ವಾದ ಮಂಡನೆ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಅರ್ಜಿಯ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಪಟ್ಟಕ್ಕಾಗಿ ನಂಬರ್ ಗೇಮ್ ಆರಂಭವಾಗಿದೆ. ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುವ ಪಾಲಿಕೇತರ ಸದಸ್ಯರ ಪಟ್ಟಿ ಸಿದ್ಧಗೊಂಡಿದೆ. ಮೇಯರ್ ಗದ್ದುಗೆ ಏರಲು ಮ್ಯಾಜಿಕ್ ನಂಬರ್ 131. ಮತದಾನ ಮಾಡುವ ಒಟ್ಟು ಸದಸ್ಯರ ಸಂಖ್ಯೆ 260.

English summary
Five women corporators from BJP approached the Karnataka high court that, Why voting rights for MPs, legislators in BBMP mayor elections. Hearing was adjourned to September 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X