ಎನ್.ಆರ್. ರಮೇಶ್‌ ಮನವೊಲಿಕೆ: ಬಿಎಸ್‌ವೈ ಹೇಳಿಕೆ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 09: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಎನ್.ಆರ್. ರಮೇಶ್ ಅವರ ಮನವೊಲಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೋಮವಾರ ಹೇಳಿದರು.

ಟಿಕೆಟ್ ಕೈತಪ್ಪಿದಾಗ ಆಕಾಂಕ್ಷಿಗಳಲ್ಲಿ ಅಸಮಾಧಾನ ಉಂಟಾಗುವುದು ಸಹಜ. ಈ ಸಂಬಂಧ ಅವರೊಂದಿಗೆ ಚರ್ಚೆ ನಡೆಸಿ ಅವರ ಮನವೊಲಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಟಿಕೆಟ್ ಕೈತಪ್ಪಲು ಸಚಿವ ಅನಂತಕುಮಾರ್ ಕಾರಣ: ಎನ್,ಆರ್. ರಮೇಶ್

ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎನ್.ಆರ್. ರಮೇಶ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದಾಗಿ ಅವರು ಭರವಸೆ ನೀಡಿದರು. ಎಲ್ಲವನ್ನೂ ಸರಿಪಡಿಸಿಕೊಂಡು ಮುಂದೆ ಹೋಗುತ್ತೇವೆ ಎಂದು ಹೇಳಿದರು.

will convince ramesh on ticket issue: bsy

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಉದ್ಯಮಿ ಉದಯ್ ಗರುಡಾಚಾರ್ ಅವರಿಗೆ ಟಿಕೆಟ್ ನೀಡಲು ಸಚಿವ ಅನಂತಕುಮಾರ್ 2 ಕೋಟಿ ರೂಪಾಯಿ ಹಣ ಪಡೆದುಕೊಂಡಿದ್ದಾರೆ ಎಂದು ಎನ್.ಆರ್. ರಮೇಶ್ ಆರೋಪಿಸಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎನ್.ಆರ್. ರಮೇಶ್ ಹಾಗೆಲ್ಲ ಮಾತನಾಡುವುದಿಲ್ಲ. ಹಾಗೆ ತಪ್ಪು ಗ್ರಹಿಕೆ ಆಗಿದ್ದರೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
bjp sate president B.S. Yeddyurappa said, he will speak to chickpet ticket aspirant N.R. Ramesh to convince him. And assured him a good position after bjp government came to power

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ