ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ವರ್ಕಿಂಗ್ ಕಮಿಟಿ ರಚನೆ, ಸಿದ್ದರಾಮಯ್ಯಗೆ ಸ್ಥಾನ

By Gururaj
|
Google Oneindia Kannada News

Recommended Video

ರಾಷ್ಟ್ರ ರಾಜಕಾರಣಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ ಸಿದ್ದರಾಮಯ್ಯ | Oneinda Kannada

ಬೆಂಗಳೂರು, ಜುಲೈ 17 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ವರ್ಕಿಂಗ್ ಕಮಿಟಿ ರಚನೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿಯಲ್ಲಿ ಸ್ಥಾನ ಪಡೆದಿದ್ದು, ರಾಷ್ಟ್ರರಾಜಕಾರಣಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಮಂಗಳವಾರ ರಾಹುಲ್ ಗಾಂಧಿ ಎಐಸಿಸಿ ವರ್ಕಿಂಗ್ ಕಮಿಟಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಗುಲಾಂ ನಬಿ ಆಜಾರ್ ಸೇರಿದಂತೆ 23 ಸದಸ್ಯರು ಸಮಿತಿಯಲ್ಲಿದ್ದಾರೆ.

ಮಹತ್ವದ ಬೆಳವಣಿಗೆ: ಆಂಧ್ರ ಮಾಜಿ ಸಿಎಂ ಕಿರಣ್‌ ರೆಡ್ಡಿ ಮರಳಿ ಕಾಂಗ್ರೆಸ್‌ಗೆಮಹತ್ವದ ಬೆಳವಣಿಗೆ: ಆಂಧ್ರ ಮಾಜಿ ಸಿಎಂ ಕಿರಣ್‌ ರೆಡ್ಡಿ ಮರಳಿ ಕಾಂಗ್ರೆಸ್‌ಗೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಸಮಿತಿಗೆ ಸೇರಿಸಿಕೊಳ್ಳಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರ ಬದಲು ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗಿದೆ.

Siddaramaiah

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸೇರುವ ಮೂಲಕ ಸಿದ್ದರಾಮಯ್ಯ ಅವರು ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೆಚ್ಚಿಸಿಕೊಂಡಿದ್ದಾರೆ. ಸಮಿತಿ ಸೇರುವ ಮೂಲಕ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣದತ್ತ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಗೆ ರಾಹುಲ್‌ ಗಾಂಧಿ ನೀಡಿದ್ದಾರೆ ಹೊಸ ಜವಾಬ್ದಾರಿಮಲ್ಲಿಕಾರ್ಜುನ ಖರ್ಗೆಗೆ ರಾಹುಲ್‌ ಗಾಂಧಿ ನೀಡಿದ್ದಾರೆ ಹೊಸ ಜವಾಬ್ದಾರಿ

ಹಿರಿಯ ಮತ್ತು ಕಿರಿಯ ನಾಯಕರನ್ನು ಒಳಗೊಂಡ ಸಮಿತಿಯನ್ನು ರಾಹುಲ್ ಗಾಂಧಿ ರಚನೆ ಮಾಡಿದ್ದಾರೆ. ಜು.22ರಂದು ಸಮಿತಿ ಮೊದಲ ಸಭೆ ನಡೆಯಲಿದೆ. ಕಾಂಗ್ರೆಸ್‌ ಪಕ್ಷದ ಎಲ್ಲಾ ಪ್ರಮುಖ ನಿರ್ಧಾರವನ್ನು ವರ್ಕಿಂಗ್ ಕಮಿಟಿ ಸಭೆಯ ಬಳಿಕ ತೆಗೆದುಕೊಳ್ಳಲಾಗುತ್ತದೆ.

ಸಮಿತಿಯ ಸದಸ್ಯರು

committee
English summary
AICC president Rahul Gandhi on July 17, 2018 constituted the Congress Working Committee (CWC). CWC is the party's highest decision making body. Committee includes 23 members. Former Karnataka Chief Minister Siddaramaiah also member of the committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X