ಬೆಂಗಳೂರಿನಲ್ಲಿ ಬಿಜೆಪಿ ಸಮಾವೇಶಕ್ಕೆ ಯೋಗಿ ಆದಿತ್ಯನಾಥ್ ಚಾಲನೆ

Subscribe to Oneindia Kannada

ಬೆಂಗಳೂರು, ಜನವರಿ 7: ಪರಿವರ್ತನಾ ಯಾತ್ರೆ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿರುವ ಬೃಹತ್ ಸಾರ್ವಜನಿಕ ಸಭೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಾಲನೆ ನೀಡಿದ್ದಾರೆ. ದೀಪ ಬೆಳಗಿಸುವ ಮೂಲಕ ಅವರು ಸಮಾವೇಶವನ್ನು ಉದ್ಘಾಟಿಸಿದ್ದಾರೆ.

ವಿಜಯನಗರದ ಎಂ.ಸಿ.ಎ ಲೇಔಟ್ ನಲ್ಲಿರುವ ಬಿ.ಜಿ.ಎಸ್ ಆಟದ ಮೈದಾನದಲ್ಲಿ ಈ ಬೃಹತ್ ಸಾರ್ವಜನಿಕ ಸಭೆ ನಡೆಯುತ್ತಿದೆ. ಅಂದುಕೊಂಡಂತೆ ನಡೆದಿದ್ದರೆ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಬೇಕಿತ್ತು. ಆದರೆ ತಡವಾಗಿ ಅಂದರೆ 12 ಗಂಟೆಗೆ ಸಮಾವೇಶ ಆರಂಭವಾಗಿದೆ.

Yogi Adityanath inaugurates BJP rally in Vijayanagara, Bengaluru

ಕರ್ನಾಟಕ ಚುನಾವಣೆ : ಯೋಗಿ ಆದಿತ್ಯನಾತ್ ಸ್ಟಾರ್ ಪ್ರಚಾರಕ

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಡಿ.ವಿ ಸದಾನಂದ ಗೌಡ, ಬಿಜೆಪಿ ನಾಯಕರಾದ ಈಶ್ವರಪ್ಪ, ಆರ್.ಅಶೋಕ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭಾಗವಹಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Uttar Pradesh Chief Minister Yogi Adityanath has inaugurated a massive public rally organized by the BJP in Bengaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ