Bengaluru South Elections: ನಾಲ್ಕನೇ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿ ಎಂ.ಕೃಷ್ಣಪ್ಪ
ಬೆಂಗಳೂರು, ಮಾರ್ಚ್, 27: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಎಲ್ಲಾ ಪಕ್ಷಗಳ ರಾಜಕಾರಣಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾರರನ್ನು ಸೆಳೆಯಲು ಭರ್ಜರಿ ಪ್ರಚಾರವನ್ನೂ ಕೂಡ ಆರಂಭಿಸಿದ್ದಾರೆ. ಹಾಗಾದರೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸ್ಥಿತಿಗತಿ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದದಾಗಿದೆ. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಎಂ.ಕೃಷ್ಣಪ್ಪ ಜಯಗಳಿಸಿದ್ದರು. ಇನ್ನು ಇವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆರ್.ಕೆ. ರಮೇಶ್ 30,417 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಹಾಗೆಯೇ ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬೆಂಗಳೂರು ದಕ್ಷಿಣ ಕ್ಷೇತ್ರ ಪರಿಚಯ
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಎಂ.ಕೃಷ್ಣಪ್ಪನವರು ಮೂರು ಬಾರಿಯೂ ಗೆಲುವು ಸಾಧಿಸುವ ಮೂಲಕ ಹಿಡಿತ ಸಾಧಿಸಿದ್ದಾರೆ. ಇದೀಗ ಮುಂದಿನ ಚುನಾವಣೆಯಲ್ಲಿ ಎಂ.ಕೃಷ್ಣಪ್ಪನವರನ್ನು ಪರಾಭವಗೊಳಿಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಜೊತೆಗೆ ಜೆಡಿಎಸ್ ಕೂಡ ತನ್ನದೇ ಮತ ಬ್ಯಾಂಕ್ ತೆರೆಯುವ ಸಿದ್ಧತೆ ನಡೆಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರು ದಕ್ಷಿಣದವರೆಗೂ ವಿಸ್ತರಿಸಿಕೊಂಡಿರುವ ಕ್ಷೇತ್ರ ಉತ್ತರಹಳ್ಳಿಯಿಂದ ಆರಂಭವಾಗುತ್ತದೆ. ಇಲ್ಲಿಂದ ಸುಬ್ರಹ್ಮಣ್ಯಪುರ, ವಸಂತಪುರ, ಯಲಚೇನಹಳ್ಳಿ, ಚುಂಚಘಟ್ಟ, ಬೇಗೂರು, ಕಾಳೇನ ಅಗ್ರಹಾರ, ಗೊಟ್ಟಿಗೆರೆ ಸುತ್ತಮುತ್ತಲಿನ ಪ್ರದೇಶವನ್ನು ಆವರಿಸಿದೆ. ನಗರವಾಗಿ ಮಾರ್ಪಾಡಾಗುತ್ತಿರುವ ಹಳ್ಳಿಗಳು, ನೈಸ್ ರಸ್ತೆಯಿಂದ ಆಚೆಯಿರುವ ಹಳ್ಳಿಗಳೂ ಕೂಡ ಈ ಕ್ಷೇತ್ರದ ವ್ಯಪ್ತಿಯಲ್ಲಿ ಬರುತ್ತವೆ. ಎಲೆಕ್ಟ್ರಾನಿಕ್ ಸಿಟಿಯಿಂದ ಬನ್ನೇರುಘಟ್ಟದವರೆಗೆ ಮತ್ತು ಜಿಗಣಿವರೆಗೂ ವಿಸ್ತರಿಸಿಕೊಂಡಿದೆ.

ಕ್ಷೇತ್ರ ರಚನೆಯಾಗಿದ್ದು ಹೇಗೆ?
ಇನ್ನು 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಆದಾಗ ಉತ್ತರಹಳ್ಳಿ ಕ್ಷೇತ್ರದಲ್ಲಿದ್ದ ಪ್ರದೇಶಗಳು ಬೆಂಗಳೂರು ದಕ್ಷಿಣ ಕ್ಷೇತ್ರವಾಗಿ ಪ್ರತ್ಯೇಕಗೊಂಡವು. ಇಲ್ಲಿ ನಗರ ಮತ್ತು ಗ್ರಾಮೀಣ ಜನರು, ವಲಸೆ ಕಾರ್ಮಿಕರೇ ಮತದಾರರಾಗಿದ್ದಾರೆ. ಇದು ರಾಜ್ಯದಲ್ಲಿಯೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ವಿಧಾನಸಭಾ ಕ್ಷೇತ್ರ ಎಂಬುದೇ ಮತ್ತೊಂದು ವಿಶೇಷವಾಗಿದೆ. ಕ್ಷೇತ್ರದಲ್ಲಿ 6.50 ಲಕ್ಷ ಮತದಾರರಿದ್ದು, 2018ರಲ್ಲಿ ನಡೆದ ಚುನಾವಣೆಯಲ್ಲಿ 6.03 ಲಕ್ಷ ಜನರು ಮತ ಚಲಾವಣೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕ್ಷೇತ್ರ ವಿಂಗಡಣೆ ಆದ ನಂತರ ಎಲ್ಲ ಚುನಾವಣೆಗಳಲ್ಲೂ ಇಲ್ಲಿ ಬಿಜೆಪಿ ತನ್ನ ಹಿಡಿತವನ್ನು ಬಿಟ್ಟುಕೊಟ್ಟಿಲ್ಲ. ಸತತ ಮೂರು ಬಾರಿಯೂ ಎಂ.ಕೃಷ್ಣಪ್ಪನವರೇ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಇದೀಗ ಅವರು ನಾಲ್ಕನೇ ಬಾರಿ ಅಖಾಡಕ್ಕಿಳಿಯುವ ನಿರೀಕ್ಷೆಯಲ್ಲಿದ್ದಾರೆ. ಮತ್ತೊಂದೆಡೆ ಬಿಜೆಪಿ ಪಕ್ಷದಿಂದ ತುಳಸಿ ಮುನಿರಾಜಗೌಡ ಸಹ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ರಾಜರಾಜೇಶ್ವರಿನಗರ ಇಲ್ಲ ಬೆಂಗಳೂರು ದಕ್ಷಿಣ ಇವೆರಡರಲ್ಲಿ ಒಂದು ಕಡೆ ಟಿಕೆಟ್ ಬಯಸಿದ್ದಾರೆ. ಅದರಲ್ಲೂ ಬೆಂಗಳೂರು ದಕ್ಷಿಣದಿಂದ ಅಖಾಡಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.
ಸೋಲು, ಗೆಲುವಿನ ಲೆಕ್ಕಾಚಾರ
ಇನ್ನು ಕಾಂಗ್ರೆಸ್‌ನಿಂದ ಆರ್.ಕೆ.ರಮೇಶ್, ರಾಜಗೋಪಾಲರೆಡ್ಡಿ, ಅವರ ಪತ್ನಿ ಸುಷ್ಮಾ ರಾಜಗೋಪಾಲರೆಡ್ಡಿ, ಕಿಶೋರ್ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. 2018ರ ಚುನಾವಣೆಯಲ್ಲಿ ಆರ್.ಕೆ.ರಮೆಶ್ ಸ್ಪರ್ಧಿಸಿ 1.22 ಲಕ್ಷ ಮತಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನವನ್ನು ಆಕ್ರಮಿಸಿದ್ದು, ಈ ಬಾರಿಯೂ ಟಿಕೆಟ್ ಬಯಸಿದ್ದಾರೆ ಎನ್ನಲಾಗಿದೆ. 2008ರ ಚುನಾವಣೆಯಲ್ಲಿ ರಾಜಗೋಪಾಲರೆಡ್ಡಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ 17 ಸಾವಿರ ಮತಗಳನ್ನು ಪಡೆದಿದ್ದು, ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
Bengaluru South Karnataka Elections
| ವರ್ಷ | ವಿಜೇತರು | ಮತಗಳು | ಸೋತವರು | ಮತಗಳು |
| 2018 | ಎಂ. ಕೃಷ್ಣಪ್ಪ (ಬಿಜೆಪಿ) | 152,469 | ಆರ್ ಕೆ ರಮೇಶ್ (ಕಾಂಗ್ರೆಸ್) | 122,052 |
| 2013 | ಎಂ. ಕೃಷ್ಣಪ್ಪ (ಬಿಜೆಪಿ) | 102,207 | ಆರ್.ಪ್ರಭಾಕರ್ ರೆಡ್ಡಿ (ಜೆಡಿಎಸ್) | 72,045 |
| 2008 | ಎಂ. ಕೃಷ್ಣಪ್ಪ (ಬಿಜೆಪಿ) | 71,114 | ಸದಾನಂದ ಎಂ. (ಕಾಂಗ್ರೆಸ್) | 36,979 |
ಹಾಗೆಯೇ ಆರ್.ಪ್ರಭಾಕರ ರೆಡ್ಡಿಗೆ ಜೆಡಿಎಸ್ ಪಕ್ಷ ಟಿಕೆಟ್ ಘೋಷಣೆ ಮಾಡಿದೆ. ಪ್ರಭಾಕರ ರೆಡ್ಡಿ 2013ರಲ್ಲಿ ಸ್ಪರ್ಧೆ ಮಾಡಿ 71 ಸಾವಿರ ಮತಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನವನ್ನು ಅಲಂಕರಿಸಿದ್ದರು. ಆದರೆ 2018ರ ಚುನಾವಣೆಯಲ್ಲಿ 36 ಸಾವಿರ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು.
ಒಟ್ಟಿನಲ್ಲಿ ಚುನಾವಣೆ ಹತ್ತಿರವಾಗುತ್ತಿದಂತೆ ಮೂರು ಪಕ್ಷಗಳ ನಾಯಕರು ಕ್ಷೇತ್ರಗಳಲ್ಲಿ ಓಡಾಟ ನಡೆಸಿದ್ದಾರೆ. ಮತ್ತೊಂದೆಡೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಬಿಜೆಪಿಯ ಎಂ.ಕೃಷ್ಣಪ್ಪ ಮತ್ತೆ ಅಖಾಡಕ್ಕಿಳಿಯಲು ಬಯಸಿದ್ದಾರೆ. ಆದರೆ ಈ ಬಾರಿ ಬಿಜೆಪಿ ಟಿಕೆಟ್ ಯಾರಿಗೆ ಘೋಷಣೆ ಮಾಡಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications