Get Updates
Get notified of breaking news, exclusive insights, and must-see stories!

International Day Of Democracy: ಬೆಳಗಾವಿಯಲ್ಲಿ 145 ಕಿ. ಮೀ. ಉದ್ದದ ಮಾನವ ಸರಪಳಿ

ಬೆಳಗಾವಿ, ಸೆಪ್ಟೆಂಬರ್ 14: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕರ್ನಾಟಕದ ಜಿಲ್ಲೆಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರಾಮದುರ್ಗ-ಕಿತ್ತೂರುವರೆಗೆ 145 ಕಿ. ಮೀ. ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತದೆ. ಈ ಮಾರ್ಗದಲ್ಲಿ ಸುರಕ್ಷತೆ, ಸಾರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಅನಾನುಕೂಲವಾಗದಂತೆ ಅಗತ್ಯ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೆಪ್ಟೆಂಬರ್ 15ರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ‌ ಗುಳೇದ ಅವರೊಂದಿಗೆ ಮಾನವ ಸರಪಳಿ ನಿರ್ಮಾಣ ಮಾಡುವ ಮಾರ್ಗವನ್ನು ಸಹ ಪರಿಶೀಲಿಸಿದರು, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

145 Km Human Chain To Be Formed For International Day Of Democracy At Belagavi

ಹೇಗೆ ನಡೆದಿದೆ ಸಿದ್ಧತೆ?; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, "ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 145 ಕಿ. ಮೀ. ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು" ಎಂದು ಹೇಳಿದರು.

"ಸಂವಿಧಾನದ ಮೌಲ್ಯ ಹಾಗೂ ಅದರ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಕಳೆದ ವರ್ಷ ಸೆಪ್ಟೆಂಬರ್ 15ರಂದು ಸಂವಿಧಾನ ಪಿಠೀಕೆಯನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಗಿತ್ತು" ಎಂದರು.

"ಈ ಬಾರಿ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ 30 ಜಿಲ್ಲೆಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಭಾರತದ ಸಂವಿಧಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವದು. ಬೆಳಗಾವಿ ಜಿಲ್ಲೆಯಲ್ಲಿ ರಾಮದುರ್ಗ-ಕಿತ್ತೂರುವರೆಗೆ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತದೆ" ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

"ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಬಾಗಲಕೋಟೆ ಜಿಲ್ಲೆಯಿಂದ ಜೋಡಿಸಲಾಗುವ ಮಾನವ ಸರಪಳಿಯು ಬೆಳಗಾವಿ ಜಿಲ್ಲೆಯಲ್ಲಿ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಿಂದ ಪ್ರಾರಂಭವಾಗಿ ಕಿತ್ತೂರ ತಾಲೂಕಿನ ತೇಗೂರ ಗ್ರಾಮಕ್ಕೆ ಕೊನೆಗೊಳ್ಳುತ್ತದೆ. ಜಿಲ್ಲೆಯಲ್ಲಿ 145 ಕಿ. ಮೀ. ವ್ಯಾಪ್ತಿಯಲ್ಲಿ ಮಾನವ ಸರಪಳಿ ನಿರ್ಮಿಸಲು ಯೋಜಿಸಲಾಗಿದೆ. ಅಂದಾಜು 1.25 ಲಕ್ಷ ಸಾವಿರ ಜನ ಭಾಗಿಯಾಗುವ ನೀರಿಕ್ಷೆ ಹೊಂದಲಾಗಿದೆ" ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಮಾತನಾಡಿ, "ಕಾರ್ಯಕ್ರಮದ ಯಶಸ್ವಿಗಾಗಿ ಪ್ರತಿ ಗ್ರಾಮಗಳಿಂದ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳುವಂತೆ ಕ್ರಮ ವಹಿಸಲಾಗಿದೆ. ಸ್ಥಳೀಯವಾಗಿ ತಂಡಗಳನ್ನು ರಚಿಸಿಲಾಗಿದ್ದು, ಪ್ರತಿ 200 ಮೀಟರ್‌ಗೆ ಒಬ್ಬ ಸೆಕ್ಟೆರ್ ಅಧಿಕಾರಿಯನ್ನು, ಪ್ರತಿ 1 ಕಿ.ಮೀ. ತಾಲೂಕು ಮಟ್ಟದ, ಹಾಗೂ ಪ್ರತಿ 5 ಕಿ.ಮೀ. ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೇಮಿಸಲಾಗಿದೆ. ಮಾನವ ಸರಪಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನರು ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ" ಎಂದು ತಿಳಿಸಿದರು.

ಮಾನವ ಸರಪಳಿ ನಿರ್ಮಾಣದ ಹಿನ್ನಲೆಯಲ್ಲಿ ಸುರಕ್ಷತೆ, ಸುಗಮ ಸಾರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಅನಾನುಕೂಲವಾಗದಂತೆ ಸರ್ಕಾರದ ನಿರ್ದೇಶನಗಳ ಪ್ರಕಾರ ನಿಗದಿತ ಸಮಯದಲ್ಲಿ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಯುವ ಸಮುದಾಯ, ಸಂಘ-ಸಂಸ್ಥೆಗಳ ಸದಸ್ಯರು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಮಾನವ ಸರಪಳಿ ನಿರ್ಮಾಣಕ್ಕೆ ಅನುಕೂಲವಾಗುವಂತೆ‌ ಸೂಕ್ತ ಭದ್ರತೆ ಮತ್ತು ಪಾರ್ಕಿಂಗ್ ಸ್ಥಳ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಜನರಿಗೆ ತಾವು ನಿಲ್ಲಬೇಕಾದ ಸ್ಥಳ ಮತ್ತಿತರ ವಿಷಯಗಳ ಕುರಿತು ಮಾರ್ಗದರ್ಶನ ನೀಡುವುದಕ್ಕೆ ಸಂಬಂಧಿಸಿದಂತೆ ಫಲಕ ಅಳವಡಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಸೂಚನೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+