ಬೆಳಗಾವಿ; ಒಂದೇ ದಿನ 17 ಕೊರೊನಾ ಪ್ರಕರಣಗಳು ದಾಖಲು

ಬೆಳಗಾವಿ, ಏಪ್ರಿಲ್ 16 : ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 17 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಗುಲಿರುವವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗುರುವಾರ ಬೆಳಗಿನ ಪ್ರಕಟಣೆಯಂತೆ ಹೊಸ 17 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 36 ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುತ್ತಿದೆ.

ಗುರುವಾರ ಬೆಳಗ್ಗೆ ಬಿಡುಗಡೆ ಮಾಡಿದ ಪ್ರಕಟಣೆಯಂತೆ ಹಿರೇಬಾಗೇವಾಡಿಯಲ್ಲಿ 8, ಚಿಕ್ಕೋಡಿ 1, ರಾಯಭಾಗ 7 ಹಾಗೂ ಬೆಳಗಾವಿಯಲ್ಲಿ 1 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

17 New COVID 19 Cases Reported In Belagavi

ಕೇಂದ್ರ ಆರೋಗ್ಯ ಸಚಿವಾಲಯ ಕರ್ನಾಟಕದ 8 ಜಿಲ್ಲೆಗಳನ್ನು ಹಾಟ್ ಸ್ಪಾಟ್‌ ಎಂದು ಘೋಷಣೆ ಮಾಡಿದೆ. ಬೆಳಗಾವಿಯಲ್ಲಿ ಕೊರೊನಾ ಹರಡುತ್ತಿರುವುದರಿಂದ ಅದನ್ನು ಸಹ ಹಾಟ್ ಸ್ಪಾಟ್ ಪಟ್ಟಿಗೆ ಸೇರಿಸಲಾಗಿದೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಇತ್ತೀಚೆಗೆ ಮೃತಪಟ್ಟ 80 ವರ್ಷದ ವೃದ್ಧೆಗೆ ಕೋವಿಡ್ 19 ಸೋಂಕು ಇರುವುದು ಬುಧವಾರ ದೃಢಪಟ್ಟಿದೆ. ಜಿಲ್ಲಾಡಳಿತ ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನಯ ಕೈಗೊಳ್ಳುತ್ತಿದೆ.

ಪೀರನವಾಡಿ ಗ್ರಾಮದಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಸದರಿ ಗ್ರಾಮವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ತನಕ ಕಂಟೈನ್ಮೆಂಟ್ ಝೋನ್ ಎಂದು ಜಿಲ್ಲಾಡಳಿತ ಘೋಷಣೆ ಮಾಡಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸೋಮವಾರ ಕೋವಿಡ್ 19 ನಿಯಂತ್ರಣ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು. ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದ್ದರು.

ತಬ್ಲಿಘಿ ಜಮಾತ್ ಜೊತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್‌ಗೆ ಒಳಪಡಿಸಿ ಎಂದು ಸೂಚಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+