ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ; ತಾಯಿ, ಮಕ್ಕಳ 'ಸ್ಮಾರ್ಟ್' ಆಸ್ಪತ್ರೆ ಲೋಕಾರ್ಪಣೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 17: ಸ್ಮಾರ್ಟ್ ಸಿಟಿ ಯೋಜನೆಯಡಿ ಶ್ರೀನಗರದ ವಂಟಮುರಿ ಕಾಲೊನಿಯಲ್ಲಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮಕ್ಕಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶಾಸಕ ಅನಿಲ್ ಬೆನಕೆ ಮಂಗಳವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಇಲ್ಲಿನ ಶ್ರೀನಗರದ ಡಬಲ್ ರಸ್ತೆಯಲ್ಲಿರುವ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ 2.75 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಇದರಿಂದ ಸ್ಥಳೀಯ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಲಭಿಸಲಿದೆ ಎಂದು ತಿಳಿಸಿದರು.

ಕೆಲವೇ ತಿಂಗಳಲ್ಲಿ ರಾಮನಗರದಲ್ಲಿ ಜಾಗತಿಕ ಗುಣಮಟ್ಟದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಕೆಲವೇ ತಿಂಗಳಲ್ಲಿ ರಾಮನಗರದಲ್ಲಿ ಜಾಗತಿಕ ಗುಣಮಟ್ಟದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ 30 ಹಾಸಿಗೆಗಳ ನೂತನ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ, ನವಜಾತ ಶಿಶು ತುರ್ತು ನಿಗಾ ಘಟಕ ಸೇರಿದಂತೆ ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಯ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ವಿವರಿಸಿದರು. ಇದಲ್ಲದೆ ಸುಸಜ್ಜಿತ ವಿಶ್ರಾಂತಿ ಘಟಕ, ಹೆರಿಗೆ-ಶಿಶು ತಜ್ಞ ವೈದ್ಯರ ಕೊಠಡಿಗಳು, ನವಜಾತ ಶಿಶು ಆರೈಕೆ ಘಟಕ, ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ಕೊಠಡಿ, ಅಗ್ನಿ ನಿರೋಧಕ ಸೌಲಭ್ಯವುಳ್ಳ ಕೊಠಡಿಗಳು, ಚುಚ್ಚುಮದ್ದು, ಶ್ರವಣಾತೀತ ಧ್ವನಿ ಕೊಠಡಿ ಹಾಗೂ ಪ್ರಸವಪೂರ್ವ ಕೊಠಡಿಗಳನ್ನು ಆಸ್ಪತ್ರೆಯು ಒಳಗೊಂಡಿದೆ ಎಂದು‌ ಅನಿಲ್ ಬೆನಕೆ ಹೇಳಿದರು.

Belagavi: 2.75 Crores Cost 30 Bed Primary Health Centre Inaugurated At Srinagar

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಜನರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
MLA Anil Benake on Tuesday inaugurated the 30 bed primary health center under the Smart City project in Vantamuri colony at Srinagar under the Smart City project,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X