Ramesh Jarkiholi: ಮತದಾರರ ಮೇಲೆ ಪ್ರಭಾವ ಬೀರಿದ ಇಬ್ಬರು ರಮೇಶ್ ಜಾರಕಿಹೊಳಿ ಬೆಂಬಲಿಗರ ವಿರುದ್ಧ ಪ್ರಕರಣ
ಬಿಜೆಪಿ ತನ್ನ ಪರಿಶಿಷ್ಟ ಜಾರಿ ಮತ್ತು ಪರಿಶಿಷ್ಟ ಪಂಗಡ ವಿಭಾಗದ ಸಮಾವೇಶದ ನಂತರ ಸುಮಾರು 3,000 ಜನರಿಗೆ ಬಾಡೂಟ ವ್ಯವಸ್ಥೆ ಮಾಡಿತ್ತು.
ಬೆಳಗಾವಿ, ಮಾರ್ಚ್ 19: ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದು, ರಾಜಕೀಯ ನಾಯಕರು ಮತತದಾರರನ್ನು ತಮ್ಮತ್ತ ತಿರುಗಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ. ಹೀಗೆ ಮತದಾರರ ಮೇಲೆ ಪ್ರಭಾವ ಬೀರಿದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಇಬ್ಬರು ಬೆಂಬಲಿಗರ ವಿರುದ್ಧ ಚುನಾವಣಾ ಜವಾಬ್ದಾರಿ ಹೊತ್ತಿರುವ ಬೆಳಗಾವಿ ಜಿಲ್ಲಾಡಳಿತದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಡಲಗಾದ ನಾಗೇಶ್ ಮನ್ನೋಳ್ಕರ್ ಮತ್ತು ಬೆಳಗಾವಿ ತಾಲೂಕಿನ ಸಂತಿಬಸ್ತವಾಡದ ನಾಗೇಂದ್ರ ಬಾಳಪ್ಪ ನಾಯಕ್ ವಿರುದ್ಧ ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 171 (ಇ) (ಲಂಚ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಎಸ್‌ಸಿ/ಎಸ್‌ಟಿ ಮತದಾರರ ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನರಿಗೆ ಸಾಮೂಹಿಕ ಊಟದ ವ್ಯವಸ್ಥೆ ಮತ್ತು ಬಾಡೂಟ ಉಣಬಡಿಸಿದ ಆರೋಪವನ್ನು ಇಬ್ಬರೂ ಎದುರಿಸುತ್ತಿದ್ದಾರೆ.

ಬಿಜೆಪಿ ತನ್ನ ಪರಿಶಿಷ್ಟ ಜಾರಿ ಮತ್ತು ಪರಿಶಿಷ್ಟ ಪಂಗಡ ವಿಭಾಗದ ಸಮಾವೇಶದ ನಂತರ ಸುಮಾರು 3,000 ಜನರಿಗೆ ಬಾಡೂಟ ವ್ಯವಸ್ಥೆ ಮಾಡಿತ್ತು. ಹಿಂಡಲಗಾದ ನಾಗೇಶ್ ಮನ್ನೋಳ್ಕರ್ ವಿರುದ್ಧ ಪ್ರಕರಣ ದಾಖಲಾಗಿದೆ. ಆಹಾರ ಬೇಯಿಸಿದ ಪಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಳಗಾವಿ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಅರುಣ್ ಮುರಗುಂಡಿ ತಿಳಿಸಿದ್ದಾರೆ. ನಾಗೇಶ್ ಮನ್ನೋಳ್ಕರ್ ರಮೇಶ್ ಜಾರಕಿಹೊಳಿ ಬೆಂಬಲಿಗರಾಗಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸುವ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರು.
ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದರು. ಚುನಾವಣೆಗೆ ಮುನ್ನ ಮತದಾರರ ಮೇಲೆ ಪ್ರಭಾವ ಬೀರುವುದನ್ನು ತಡೆಯಲು ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ತಂಡದಲ್ಲಿದ್ದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಹೀಗೆ ಹಲವು ಕಾರ್ಯಕ್ರಮ ನಡೆಸಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಕೆಲಸದಲ್ಲಿ ತೊಡಗೊಕೊಳ್ಳುತ್ತವೆ.

ಇನ್ನೊಂದು ಪ್ರಕರಣದಲ್ಲಿ ಕಳೆದ ಬುಧವಾರ ಗೋಕಾಕ ತಾಲೂಕಿನ ಯದ್ದಲಗೂಡು ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಲೆಕ್ಕಕ್ಕೆ ಸಿಗದ 3.5 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗೋಕಾಕ ತಹಶೀಲ್ದಾರ್ ನೀಡಿದ ಮಾಹಿತಿ ಪ್ರಕಾರ ಮನ್ನಿಕೇರಿ ಗ್ರಾಮದ ಲಕ್ಷ್ಮಣ ಹನುಮಂತ ಗಡದ್ ಎಂಬಾತ ಕಾರಿನಲ್ಲಿ ಹಣ ಸಾಗಿಸುತ್ತಿದ್ದ. ದಾಖಲೆ ನೀಡಲು ಸಾಧ್ಯವಾಗದ ಕಾರಣ ಲೆಕ್ಕಕ್ಕೆ ಸಿಗದ ಹಣವನ್ನು ವಸೂಲಿ ಮಾಡಿ ಗೋಕಾಕದಲ್ಲಿರುವ ಖಜಾನೆಗೆ ಜಮಾ ಮಾಡಲಾಗಿದೆ.
ಉಡುಗೊರೆ ನೀಡುವ ಹಾಗೂ ಸಾಮೂಹಿಕ ಊಟ ನೀಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂತಹ ಚಟುವಟಿಕೆಗಳನ್ನು ತಡೆಯಲು ಜಿಲ್ಲಾಡಳಿತ ವಿಶೇಷ ದಳಗಳನ್ನು ರಚಿಸಿತ್ತು. ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ರಾಜಕೀಯ ಪಕ್ಷಗಳು ಮತ್ತು ಟಿಕೆಟ್ ಆಕಾಂಕ್ಷಿಗಳೊಂದಿಗೆ ನಡೆದ ಸಭೆಯಲ್ಲಿ ಮತದಾರರಿಗೆ ಲಂಚ ನೀಡುವುದು ಕಂಡುಬಂದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿಲ್ಲದಿದ್ದರೂ, ಚುನಾವಣಾ ಪೂರ್ವ ಅಕ್ರಮಗಳನ್ನು ತಡೆಗಟ್ಟಲು ಮತದಾರರನ್ನು ಓಲೈಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಹಕ್ಕು ಜಿಲ್ಲಾ ಚುನಾವಣಾ ಪ್ರಾಧಿಕಾರಕ್ಕೆ ಇದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಭೆಯಲ್ಲಿ ಹೇಳಿದರು. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಅಡುಗೆಮನೆ ಮತ್ತು ಊಟದ ಸಾಮಗ್ರಿಗಳು, ಗ್ಯಾಸ್ ಸ್ಟೌವ್ಗಳು, ಸೀರೆಗಳನ್ನು ಉಡುಗೊರೆಯಾಗಿ ನೀಡುವುದು ಮತ್ತು ಸಾಮೂಹಿಕ ಊಟವನ್ನು ಆಯೋಜಿಸುವುದು ಕಂಡುಬಂದಿದೆ.
ರಾಜಕೀಯ ಪಕ್ಷಗಳು ಹಂಚುವ ಯಾವುದೇ ವಸ್ತುವನ್ನು ವಸೂಲಿ ಮಾಡಿ ಪೊಲೀಸ್ ಪ್ರಕರಣಗಳನ್ನು ದಾಖಲಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. "ಜನರ ಮತಗಳ ಮೇಲೆ ಪ್ರಭಾವ ಬೀರಲು ವಿತರಿಸಲಾದ ಆಹಾರ ಮತ್ತು ಪಾನೀಯಗಳು ಸೇರಿದಂತೆ ಇತರ ವಸ್ತುಗಳನ್ನು ಜಿಲ್ಲಾಡಳಿತವು ವಾಪಸ್ ಪಡೆಯುತ್ತದೆ. ಚುನಾವಣಾ ನೀತಿ ಸಂಹಿತೆ ಇನ್ನೂ ಜಾರಿಯಾಗದ ಕಾರಣ, ಉಡುಗೊರೆ ವಿತರಣೆಯಲ್ಲಿ ತೊಡಗಿರುವವರ ವಿರುದ್ಧ ಪೊಲೀಸರೊಂದಿಗೆ ನಿಯಮಿತ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications