ಸಿಹಿ ಸುದ್ದಿ: ಬೆಳಗಾವಿಯಲ್ಲಿ ಕೊರೊನಾ ಗೆದ್ದ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆ
ಬೆಳಗಾವಿ, ಏಪ್ರಿಲ್ 21: ಕೋವಿಡ್-19 ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 20 ವರ್ಷದ ಯುವಕ(ಪಿ-128) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ 40 ವರ್ಷದ ವ್ಯಕ್ತಿ (ಪಿ-148)ಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಈ ಇಬ್ಬರೂ ಏಪ್ರಿಲ್ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 42 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಪೈಕಿ ಬೆಳಗುಂದಿ ಗ್ರಾಮದವರಾದ ಪಿ-126 ನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಅನುಸಾರ ಅವರನ್ನು ಏ.18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇಲ್ಲಿಯವರೆಗೆ ಒಟ್ಟಾರೆ ಮೂರು ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications