ಕಾರ್ ಪಲ್ಟಿ; ಗೋವಾಗೆ ಹೋಗುತ್ತಿದ್ದ ಇಬ್ಬರ ಸಾವು, 9 ಮಂದಿಗೆ ಗಾಯ
ಚಿಕ್ಕೋಡಿ, ಅಕ್ಟೋಬರ್ 30: ಗೋವಾಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗಿನ ಜಾವ ಬೆಳಗಾವಿಯಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಕಣಗಲಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ವೈಭವ ವಾಡ್ಕರ್ (21) ದಿಗ್ವಿಜಯ ಪಾಟೀಲ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನೊವಾ ಕಾರಿನಲ್ಲಿ ಒಟ್ಟು ಹನ್ನೊಂದು ಮಂದಿ ಪ್ರಯಾಣಿಸುತ್ತಿದ್ದರು. ಉಳಿದ 9 ಜನರಿಗೆ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಕೊಲ್ಹಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲರೂ ಬೆಳಗಾವಿ ಮಾರ್ಗವಾಗಿ ಗೋವಾ ಪ್ರವಾಸ ತೆರಳುತ್ತಿದ್ದರು. ಅಪಘಾತ ನಡೆದ ಸ್ಥಳಕ್ಕೆ ಸಂಕೇಶ್ವರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications