ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: 22 ಶಾಲೆಗಳಿಗೆ ರಜೆ ಘೋಷಣೆ

|
Google Oneindia Kannada News

ಬೆಳಗಾವಿ, ಆಗಸ್ಟ್ 22: ಜಿಲ್ಲೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ 22 ಶಾಲೆಗಳಿಗೆ ರಜೆ ಘೋಷಿಸಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಆದೇಶ ಹೊರಡಿಸಿದ್ದಾರೆ.

ಚಿರತೆ ಓಡಾಡುತ್ತಿರುವ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮುಂಜಾಗೃತ ಕ್ರಮವಾಗಿ ರಜೆ ಘೋ‍ಷಣೆ ಮಾಡಲಾಗಿದೆ. ಕಳೆದ 3 ವಾರಗಳಿಂದ ಬೆಳಗಾವಿಯ ಹಲವು ಭಾಗಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದೆ. 20 ದಿನಗಳ ಹಿಂದೆ ಕಟ್ಟಡ ಕಾರ್ಮಿಕನೊಬ್ಬನ ಮೇಲೆ ದಾಳಿ ನಡೆಸಿ ಚಿರತೆ ಪರಾರಿಯಾಗಿತ್ತು. ಜಿಲ್ಲಾಡಳಿತ ಸತತ ಪ್ರಯತ್ನ ಪಟ್ಟರು ಚಿರತೆ ಹಿಡಿಯುವಲ್ಲಿ ವಿಫಲವಾಗಿತ್ತು.

ಶಿಕ್ಷಣ ಕ್ಷೇತ್ರದ ಸಮಸ್ಯೆಗಳು: ಬೃಹತ್ ಹೋರಾಟಕ್ಕೆ ಸಂಘಟನೆಗಳ ನಿರ್ಧಾರಶಿಕ್ಷಣ ಕ್ಷೇತ್ರದ ಸಮಸ್ಯೆಗಳು: ಬೃಹತ್ ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಇದೀಗ ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಚಿರತೆ ಪತ್ತೆಯಾಗಿದ್ದು, ಬಸ್ ಚಾಲಕನೊಬ್ಬ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮತ್ತೆ ಜಿಲ್ಲೆಯಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಶಾಲಾ ಮಕ್ಕಳು, ಪೋಷಕರಲ್ಲಿ ಭಯ ಆವರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

22 Schools Declare a Holiday after leopard sightings in Belagavi

ಚಿರತೆ ಕಾಣಿಸಿಕೊಂಡ ಬೆನ್ನಲ್ಲೇ ಬೆಳಗಾವಿಯಲ್ಲಿ ಆಪರೇಷನ್ ಚಿರತೆ ಆರಂಭವಾಗಿದೆ. ನಗರದ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಒಂದು ಎಕರೆ ಪ್ರದೇಶದಲ್ಲಿ ಇರುವ ಮರಳ ಮಧ್ಯೆ ಚಿರತೆ ಅಡಗಿದೆ. ಗಾಲ್ಫ್ ಮೈದಾನ ಮತ್ತು ಕ್ಯಾಂಪ್ ಪ್ರದೇಶದ ಮಧ್ಯದಲ್ಲಿ ಚಿರತೆ ಇದೆ ಎಂದು ಹೇಳಲಾಗುತ್ತಿದ್ದು, ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿಯಿಂದ ಕೊಂಬಿಂಗ್ ಆರಂಭವಾಗಿದೆ.

ಚಿರತೆ ಪತ್ತೆಯಾದ ಸಂಪೂರ್ಣ ಪ್ರದೇಶವನ್ನ ಪೊಲೀಸರು ಬ್ಲಾಕ್ ಮಾಡಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ, ಎಸಿಎಫ್ ಮಜುಂನಾಥ ಕುಸನಾಳ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭವಾಗಿದೆ.

English summary
Holiday declared for 22 primary and secondary schools on Monday after a leopard was spotted in residential areas in Belagavi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X