ಬೆಳಗಾವಿ: ಕಾರು ಪಲ್ಟಿ, ನಾಲ್ವರು ವಿದ್ಯಾರ್ಥಿಗಳು ಸಾವು
ಬೆಳಗಾವಿ, ಜೂನ್ 30 : ತಾಲ್ಲೂಕಿನ ವಂಟಮೂರಿ ಘಾಟ್ ಬಳಿ ಗುರುವಾರ ರಾತ್ರಿ ಇನ್ನೋವಾ ಕಾರು ಪಲ್ಟಿಯಾಗಿ ನಾಲ್ವರು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಚಿಕ್ಕೋಡಿಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಜಾಜ್ ಪಠಾಣ, ವಿನಾಯಕ ಪಿರಾಜೆ, ವಿಶ್ವನಾಥ, ಸುಶಾಂತ ಮಾನೆ ಮೃತ ದುರ್ದೈವಿಗಳು.

ಪ್ರವಾಸಕ್ಕೆಂದು ಬೆಳಗಾವಿಗೆ ಬಂದಿದ್ದ ಇವರು ರಾತ್ರಿ ಚಿಕ್ಕೋಡಿಗೆ ಮರಳುವ ವೇಳೆ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಾಟ್ ಪ್ರದೇಶದಿಂದ ಇಳಿಯುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಶೀಲನೆ ನಡೆಸಿದರು.












Click it and Unblock the Notifications