• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ : ಕಾರು, ಲಾರಿ ನಡುವೆ ಭೀಕರ ಅಪಘಾತ, 5 ಸಾವು

|

ಬೆಳಗಾವಿ, ಜೂನ್ 02 : ಬೆಳಗಾವಿ ನಗರದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 5 ಜನರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ -4ರ ಶ್ರೀನಗರ ಬಳಿ ಭಾನುವಾರ ಮಧ್ಯಾಹ್ನ ಈ ಅಪಘಾತ ನಡೆದಿದೆ. ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ, ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಾಲಕ ಸೇರಿ ಐವರು ಸ್ಥಳದಲ್ಲಿಯೇ ಮೃತಪಟ್ಟವರು.

ಧಾರವಾಡ : ಭೀಕರ ಅಪಘಾತ, ಐವರು ಸ್ಥಳದಲ್ಲಿಯೇ ಸಾವು

ಮೃತಪಟ್ಟವರನ್ನು ಮಹಾರಾಷ್ಟ್ರದ ಔರಂಗಾಬಾದ್‌ನ ದೇವಗಿರಿಯ ನಿವಾಸಿಗಳಾದ ನಂದು ಪವಾರ್, ಮಹೇಶ್ ಚೌರಿ, ಅಮೂಲ ನಾವಿ, ಸುರೇಶ್ ಕಾನೇರಿ, ಅಮೂಲ ಚೌರಿ ಎಂದು ಗುರುತಿಸಲಾಗಿದೆ.

ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 15 ಜನರ ದುರ್ಮರಣ

ಭಾನುವಾರ ಕೊಲ್ಹಾಪುರದಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯಶವಂತಪುರ ಫ್ಲೈ ಓವರ್‌ ಮೇಲಿಂದ ಬಿದ್ದ ಲಾರಿ, ಕ್ಲೀನರ್ ಸಾವು

ಹೆದ್ದಾರಿಯಲ್ಲಿ ಕಾರು ವೇಗವಾಗಿ ಹೋಗುವಾಗ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಹುಡುಕಾಡ ನಡೆದಿದೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣದ ದಾಖಲಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಡಿಸಿಪಿ ಯಶೋಧ ಒಂಟಗೋಡಿ, ಎಸಿಪಿ ಎನ್‌.ವಿ.ಭರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದಾಗಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

English summary
5 killed after car collide with truck at Srinagar NH 4 Belagavi, Karnataka on June 2, 2019. Car hit the truck after tyre burst. Police visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X