ಬೆಳಗಾವಿ: ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಐವರ ಬಂಧನ
ಬೆಳಗಾವಿ, ಜುಲೈ 30: ಮಹಿಳೆಯರನ್ನು ಮುಂದೆ ಬಿಟ್ಟು ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಮಹಿಳೆಯರು ಸೇರಿದಂತೆ ಐವರನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ.
ಬೆಳಗಾವಿಯ ಮಾಳಮಾರುತಿ ಠಾಣೆಯ ಪೋಲಿಸರು ಕಾರ್ಯಾಚರಣೆ ನಡೆಸಿ ಪತ್ರಕರ್ತರ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರನ್ನು ಬಂಧಿಸಲಾಗಿದೆ. ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಬಸವರಾಜ್ ಖಾನಗೊಂಡ ಎಂಬುವವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವೇಳೆ ಖದೀಮರು ಸಿಕ್ಕಿಬಿದ್ದಿದ್ದಾರೆ.

5 ಲಕ್ಷ ರೂ. ಹಣಕ್ಕಾಗಿ ಬ್ಲ್ಯಾಕಮೇಲ್ ಮಾಡುತ್ತಿದ್ದ ಸಂದರ್ಭದಲ್ಲಿ, ಎಸಿಪಿ ನಾರಾಯಣ ಭರಮನಿ ಹಾಗೂ ಇನ್ಸ್ ಪೆಕ್ಟರ್ ಗಡ್ಡೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಬಂಧಿತರಿಂದ ಪ್ರೈಮ್ ನ್ಯೂಸ್ ಕನ್ನಡ ಹೆಸರಿನ ಯುಟ್ಯೂಬ್ ಚಾನಲ್ ಐಡಿ ಕಾರ್ಡ್ ವಶಕ್ಕೆ ಪಡೆಯಲಾಗಿದ್ದು, ಗೌರಿ ಲಮಾಣಿ, ಮಂಜುಳಾ ಜೆಟ್ಟೆಣ್ಣವರ, ಸಂಗೀತಾ ಕಣಕಿಕೊಪ್ಪ, ರಘುನಾಥ್ ದುಮಾಳೆ, ಸದಾಶಿವ ಚಿಪ್ಪಲಕಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ.












Click it and Unblock the Notifications