• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿಯ ಈ ಹಳ್ಳಿಯಲ್ಲಿನ ಅರ್ಧದಷ್ಟು ಜನರಿಗೆ ಕೊರೊನಾ ಸೋಂಕು

|

ಬೆಳಗಾವಿ, ಏಪ್ರಿಲ್ 22: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಶೇ 50ರಷ್ಟು ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಬೆಳಗಾವಿಯ ಖಾನಾಪುರ ತಾಲೂಕಿನ ಅಬನಲಿ ಗ್ರಾಮದ ಸುಮಾರು ಶೇ50ರಷ್ಟು ಗ್ರಾಮಸ್ಥರಿಗೆ ಕೊರೊನಾ ಸೋಂಕು ತಗುಲಿದೆ. ಹೀಗೆ ಏಕಾಏಕಿ ಸೋಂಕಿನ ಪ್ರಕರಣಗಳು ಏರಿಕೆಯಾದ ಕಾರಣ ಮತ್ತೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ವಿಫಲ; ಸತೀಶ್ ಜಾರಕಿಹೊಳಿಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ವಿಫಲ; ಸತೀಶ್ ಜಾರಕಿಹೊಳಿ

ಮಂಗಳವಾರ ಗ್ರಾಮದಲ್ಲಿನ ಸುಮಾರು 300 ಮಂದಿ ಪೈಕಿ 144 ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಅವರೆಲ್ಲರಲ್ಲೂ ಸೋಂಕು ದೃಢಪಟ್ಟಿದೆ. ಸೋಂಕಿತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಅವರಲ್ಲಿ ಬಹುಪಾಲು ಮಂದಿ ಈಚೆಗೆ ಗೋವಾ ಹಾಗೂ ಮಹಾರಾಷ್ಟ್ರದಿಂದ ಹಿಂದಿರುಗಿದ್ದರು ಎನ್ನಲಾಗಿದೆ. ಕೊರೊನಾ ಸೋಂಕು ಏರಿಕೆಯಾದ ಕಾರಣ ಈ ಹಳ್ಳಿಯನ್ನು ಅಧಿಕಾರಿಗಳು ಸೀಲ್ ಮಾಡಿದ್ದಾರೆ.

ಈಚೆಗೆ ಕೆಲವು ಗ್ರಾಮಸ್ಥರಲ್ಲಿ ಜ್ವರ, ಮೈಕೈ ನೋವು ಕಾಣಿಸಿಕೊಂಡಿದ್ದು, ಗ್ರಾಮದಲ್ಲಿನ ಆರೋಗ್ಯ ಕೇಂದ್ರಕ್ಕೆ ಹೋಗಿದ್ದಾರೆ. ಆಗ ಅಧಿಕಾರಿಗಳು ಕೊರೊನಾ ಪರೀಕ್ಷೆ ನಡೆಸಿದ್ದು, 144 ಮಂದಿಗೆ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಮೊದಲು ಏಪ್ರಿಲ್ 10ರಂದು ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇವರು ಎಲ್ಲ ಕಡೆ ಓಡಾಡಿದ್ದು, ನಂತರ ಹೆಚ್ಚಿನ ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ.

ಬುಧವಾರ ಬೆಳಗಾವಿ ಜಿಲ್ಲೆಯಲ್ಲಿ 301 ಕೊರೊನಾ ಪ್ರಕರಣಗಳು ದಾಖಲಾಗಿವೆ. 45 ಮಂದಿ ಗುಣಮುಖರಾಗಿದ್ದು, 1384 ಸಕ್ರಿಯ ಪ್ರಕರಣಗಳಿವೆ.

English summary
Over 50 per cent population of Aabanali village in Karnataka's Belgavi tests positive for COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X