ಬೆಳಗಾವಿ : ಕುಸಿದು ಬಿದ್ದ ಪಾಲಿಕೆಯ 6 ಮಳಿಗೆಗಳು
ಬೆಳಗಾವಿ, ಫೆ.12 : ಬೆಳಗಾವಿ ಮಹಾನಗರ ಪಾಲಿಕೆಗೆ ಸೇರಿದ 6 ವಾಣಿಜ್ಯ ಮಳಿಗೆಗಳು ಕುಸಿದು ಬಿದ್ದಿವೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ಶಿವಾಜಿ ರಸ್ತೆಯಲ್ಲಿರುವ ಮಹಾನಗರ ಪಾಲಿಕೆಯ ವಾಣಿಜ್ಯ ಮಳಿಗೆಗಳ ಪೈಕಿ 6 ಮಳಿಗೆಗಳು ಬುಧವಾರ ತಡರಾತ್ರಿ ಕುಸಿದುಬಿದ್ದಿವೆ. ಈ ಸಂದರ್ಭದಲ್ಲಿ ಕಟ್ಟದಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ರಕ್ಷಣೆ ಮಾಡಿರುವ ಸ್ಥಳೀಯರು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ವಾಣಿಜ್ಯ ಮಳಿಗೆಗಳ ಬಳಿ ಚರಂಡಿ ಕಾಮಗಾರಿ ನಡೆಯುತ್ತಿತ್ತು. ಅದಕ್ಕಾಗಿ ಮಣ್ಣನ್ನು ಅಗೆಯಲಾಗಿತ್ತು. ಕಟ್ಟಡವೂ ಹಳೆಯದಾಗಿತ್ತು ಆದ್ದರಿಂದ ಕುಸಿದು ಬಿದ್ದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಕಡೇ ಬಜಾರ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. [ಬೆಳಗಾವಿಯಲ್ಲಿ ಕ್ರೀಡಾ ಅಕಾಡೆಮಿ, ಕುಂಬ್ಳೆ ಮುಂದಾಳತ್ವ]












Click it and Unblock the Notifications