ಗೋಕಾಕದಲ್ಲಿ ಜೂಜು ಅಡ್ಡೆ ಮೇಲೆ ದಾಳಿ, 63 ಜನರ ಬಂಧನ

ಬೆಳಗಾವಿ, ಅಕ್ಟೋಬರ್ 22 : ಗೋಕಾಕ ನಗರದಲ್ಲಿ ಜೂಜು ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು 63 ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ ಅವರ ಮಾರ್ಗದರ್ಶನದಲ್ಲಿ ಗೋಕಾಕ ಡಿವೈಎಸ್ಪಿ ಇ.ಎಸ್.ವೀರಭದ್ರಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಳವಾಯಿ ಕಟ್ಟಡದಲ್ಲಿ ಜೂಜಾಡುತ್ತಿದ್ದ ಸುಹಾಸ ರಾಮಪ್ಪ ಗಡಕರಿ, ಟಿ.ಕೆ.ಸುಭಂಜಿ, ಎಸ್.ಎಸ್.ನಾಯಕ, ಗೋಪಾಲ ಬಸಪ್ಪ ಗಾಣಿಗೇರ ಹಾಗೂ 58 ಜನರನ್ನು ಬಂಧಿಸಿ ಅವರಿಂದ 4 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

63 held in gambling raids at Gokak

ಹಣ, ವಿವಿಧ ಕಂಪನಿಯ 31 ಮೊಬೈಲ್, ಒಂದು ಅಟೋರಿಕ್ಷಾ, 39 ದ್ವಿಚಕ್ರ ವಾಹನಗಳು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಭೀಮಶಿ ಯಲ್ಲಪ್ಪ, ಅಡಿವೆಪ್ಪ ಯಲ್ಲಪ್ಪ ಮಜ್ಜಗಿ ಎಂಬುವವರು ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಗೋಕಾಕ ನಗರದಲ್ಲಿ ಜೂಜು ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು 63 ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರಲ್ಲಿ ಹೆಚ್ಚಿನವರು ಯುವಕರು. ಸಿಬ್ಬಂದಿಗಳ ಕಾರ್ಯವನ್ನು ಎಸ್ಪಿ ಡಾ. ಬಿ.ಆರ್. ರವಿಕಾಂತೇಗೌಡ ಶ್ಲಾಘಿಸಿದ್ದಾರೆ. ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+