Breaking:ಬೆಳಗಾವಿಯಲ್ಲಿ ಕ್ರೂಸರ್ ಪಲ್ಟಿ- ಕೂಲಿ ಕೆಲಸಕ್ಕೆ ತೆರಳುತ್ತಿದ್ದ 7 ಕಾರ್ಮಿಕರ ದುರ್ಮರಣ

ಬೆಳಗಾವಿ, ಜೂನ್ 26: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿ ಭಾನುವಾರ ಬೆಳಗ್ಗೆ ನಡೆದಿದೆ.

ಕ್ರೂಸರ್ ವಾಹನದಲ್ಲಿ ದಿನಗೂಲಿ ಕೆಲಸಕ್ಕಾಗಿ ಕಾರ್ಮಿಕರು ಗೋಕಾಕ್‌ ತಾಲೂಕಿನಿಂದ ಬೆಳಗಾವಿಗೆ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಅಕ್ಕತಂಗೇರಹಾಳ ಗ್ರಾಮದ ಅಡಿವೆಪ್ಪ ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22), ಗೋಕಾಕ್ ತಾಲೂಕಿನ ದಾಸನಟ್ಟಿ ಗ್ರಾಮದ ಫಕಿರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30), ಮಲ್ಲಾಪುರ(ಎಸ್‌ಎ) ಗ್ರಾಮದ ಬಸವರಾಜ ಸನದಿ (35) ಮೃತಪಟ್ಟವರು ಎಂದು ತಿಳಿದುಬಂದಿದೆ.

7 People Died in Road Accident at Belagavi

ಈ ಕೂಲಿ ಕಾರ್ಮಿಕರು ದಿನ ನಿತ್ಯ ಮೂರು ವಾಹನಗಳಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಮೂರೂ ವಾಹನಗಳ ಮಧ್ಯೆ ನಾ ಮುಂದು ತಾನು ಮುಂದು ಎಂಬ ಪೈಪೋಟಿ ದಿನವೂ ನಡೆಯುತ್ತಿತ್ತು. ಈ ಪೈಪೋಟಿಯೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+