ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಬಳಿ ಅಪಘಾತದಲ್ಲಿ 7 ಸಾವು: ಮೃತರಿಗೆ ತಲಾ 5 ಲಕ್ಷ ರೂ. ಪರಿಹಾರ

|
Google Oneindia Kannada News

ಬೆಳಗಾವಿ, ಜೂ.26: ಬೆಳಗಾವಿ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಭಾನುವಾರ ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕ್ರೂಸ್ ಪಲ್ಟಿಯಿಂದ 7 ಮಂದಿ ಮೃತಪಟ್ಟಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಅಲ್ಲದೆ, ಸಾವನ್ನಪ್ಪಿದ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಬೆಳಗಾವಿಯಲ್ಲಿ ಕ್ರೂಸರ್ ಪಲ್ಟಿಯಾಗಿ 7 ಕೂಲಿ ಕಾರ್ಮಿಕರ ಸಾವುಬೆಳಗಾವಿಯಲ್ಲಿ ಕ್ರೂಸರ್ ಪಲ್ಟಿಯಾಗಿ 7 ಕೂಲಿ ಕಾರ್ಮಿಕರ ಸಾವು

ಕ್ರೂಸರ್ ಪಲ್ಟಿ: 7 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.

7 People Died in Road Accident at Belagavi: 5 lack compensation each- CM Bommai annonce

ಕ್ರೂಸರ್ ವಾಹನದಲ್ಲಿ ದಿನಗೂಲಿ ಕೆಲಸಕ್ಕಾಗಿ ಕಾರ್ಮಿಕರು ಗೋಕಾಕ್‌ ತಾಲೂಕಿನಿಂದ ಬೆಳಗಾವಿಗೆ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತಪಟ್ಟಿರುವವರೆಲ್ಲರೂ ಗೋಕಾಕ್ ತಾಲೂಕಿನ ಅಕ್ಕತಂಗಿಯರಹಾಳ್ಳ ಗ್ರಾಮದವರೆಂದು ತಿಳಿದುಬಂದಿದೆ. ವಾಹನದಲ್ಲಿ ಒಟ್ಟು 18ಕ್ಕೂ ಅಧಿಕ ಕಾರ್ಮಿಕರಿದ್ದರು ಎನ್ನಲಾಗುತ್ತಿದೆ. ಸ್ಥಳಕ್ಕೆ ಆಂಬ್ಯುಲನ್ಸ್ ಹಾಗೂ ಮಾರಿಹಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ನೆರವು ಪಡೆದು ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ. ಇನ್ನೂ ಮೃತರ ಹಾಗೂ ಕ್ರೂಸರ್‌ನಲ್ಲಿದ್ದವರ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ.

English summary
Rs 5 lakh compensation has been announced to the family of persons who died in the accident near Belgaum.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X