ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ : 42 ಅಭ್ಯರ್ಥಿಗಳಿಂದ 76 ನಾಮಪತ್ರ ಸಲ್ಲಿಕೆ

|
Google Oneindia Kannada News

ಬೆಳಗಾವಿ, ಏಪ್ರಿಲ್ 04 : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಒಟ್ಟು 42 ಜನ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಒಟ್ಟಾರೆ 76 ನಾಮಪತ್ರಗಳು ಸಲ್ಲಿಕೆಯಾಗಿವೆ.

ಗುರುವಾರ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ ಅಂಗಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ವಿರುಪಾಕ್ಷಪ್ಪ ಸಾಧುನವರ ಅವರು ನಾಮಪತ್ರಗಳನ್ನು ಸಲ್ಲಿಸಿದರು. ಏಪ್ರಿಲ್ 23ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದೆ.

ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ವಿಶಾಲ್ ಆರ್. ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಬೂದೆಪ್ಪ ಹೆಚ್.ಬಿ ಅವರು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಾಮಪತ್ರಗಳನ್ನು ಸ್ವೀಕರಿಸಿದರು.

76 nominations field in Belagavi lok sabha seat

ನಾಮಪತ್ರ ಸಲ್ಲಿಕೆ ವಿವರ : ಮಾರ್ಚ್ 28ರಂದು ಎರಡು, ಮಾರ್ಚ 29 ರಂದು ಒಂದು, ಮಾರ್ಚ 30 ರಂದು 6, ಏಪ್ರಿಲ್ 2 ರಂದು 4, ಏಪ್ರಿಲ್ 3 ರಂದು 20, ಏಪ್ರಿಲ್ 4 ರಂದು 43 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪಕ್ಷವಾರು ವಿವರ : ಭಾರತೀಯ ಜನತಾ ಪಕ್ಷದಿಂದ ಒಬ್ಬ ಅಭ್ಯರ್ಥಿ ನಾಲ್ಕು, ಕಾಂಗ್ರೆಸ್‌ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಉತ್ತಮ ಪ್ರಜಾಕೀಯ ಪಕ್ಷದಿಂದ ಒಬ್ಬ ಅಭ್ಯರ್ಥಿ ಒಂದು ನಾಮಪತ್ರ. ಸರ್ವ ಜನತಾ ಪಕ್ಷದಿಂದ ಒಬ್ಬ ಅಭ್ಯರ್ಥಿ ಒಂದು ನಾಮ ಪತ್ರ, ಬಿಎಸ್‌ಪಿ ಪಕ್ಷದಿಂದ ಒಬ್ಬರು ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಾಗಿದೆ.

ಆರ್.ಪಿ.ಐ ಪಕ್ಷದಿಂದ ಒಬ್ಬ ಅಭ್ಯರ್ಥಿ ಒಂದು ನಾಮಪತ್ರ, ಪಿ.ಎಸ್.ಪಿ ಪಕ್ಷದಿಂದ ಒಬ್ಬ ಅಭ್ಯರ್ಥಿ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಎನ್.ಡಬ್ಲ್ಯೂ.ಪಿ ಪಕ್ಷದಿಂದ ಒಬ್ಬರು ಅಭ್ಯರ್ಥಿಯಿಂದ ಒಂದು ನಾಮಪತ್ರ ಸಲ್ಲಿಕೆಯಾಗಿರುತ್ತದೆ.

58 ಪಕ್ಷೇತರ ಅಭ್ಯರ್ಥಿಗಳಿಂದ 62 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟು 67 ಅಭ್ಯರ್ಥಿಗಳಿಂದ ಇಲ್ಲಿಯವರೆಗೆ 76 ನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ.

English summary
42 candidates field 76 nominations in Belagavi lok sabha seat. April 4, 2019 last date to submit applications. Elections will be held on April 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X