7th Pay Commission: 7ನೇ ವೇತನ ಆಯೋಗ: ʼಪ್ರತಿ ಸರ್ಕಾರಿ ನೌಕರರಿಗೆ 7 ರಿಂದ 22 ಲಕ್ಷದ ವರೆಗೂ ನಷ್ಟʼ
ರಾಜ್ಯ ಸರ್ಕಾರದ ನಿವೃತ್ತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. 7ನೇ ವೇತನ ಆಯೋಗ ವಂಚಿತ ನಿವೃತ್ತ ನೌಕರರಿಂದ ಪ್ರತಿಭಟನೆ ನಡೆಯುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದಲೂ ಸರ್ಕಾರಿ ನೌಕರರು ಸೇರಿದಂತೆ ಹಲವರು ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಇದೀಗ ಸರ್ಕಾರಿ ನೌಕರರು 7ನೇ ವೇತನ ಆಯೋಗದ ವಿಚಾರವಾಗಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ನಿವೃತ್ತ ನೌಕರರು ವೇದಿಕೆಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಇದರಲ್ಲಿ ಕೆಲವೊಂದು ಗಂಭೀರ ಆರೋಪಗಳನ್ನು ಸಹ ಮಾಡಲಾಗಿದೆ.

ಬೆಳಗಾವಿಯಲ್ಲಿ ಕರ್ನಾಟಕ ನಿವೃತ್ತ ನೌಕರರು ವೇದಿಕೆಯಿಂದ ಬೃಹತ್ ಪ್ರತಿಭಟನಾ ರ್‍ಯಾಲಿಯನ್ನು ನಡೆಸಲಾಗಿದೆ. ಈ ಪ್ರತಿಭಟನಾ ರ್‍ಯಾಲಿಯಲ್ಲಿ ಅಂದಾಜು 10 ಸಾವಿರಕ್ಕೂ ಅಧಿಕ ನೌಕರರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಇಲ್ಲಿನ ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ನಿವೃತ್ತ ಸರ್ಕಾರಿ ನೌಕರರು ಕೆಲವು ಗಂಭೀವಾದ ಆರೋಪಗಳನ್ನು ಮಾಡಿದ್ದಾರೆ.
1-07-2022 ರಿಂದ 31-07- 2024 ರ ವೆರೆಗೆ ನಿವೃತ್ತಿ ಹೊಂದಿದ ಸರ್ಕಾರಿ ನೌಕರರು 7 ಆಯೋಗದಿಂದ ಹೊರಕ್ಕೆ ಹಾಕಲಾಗಿದೆ. ಈ ಅವಧಿಯಲ್ಲಿ ಸೇವೆ ಸಲ್ಲಿಸಿದರು ನಮಗೆ 7ನೇ ವೇತನ ಆಯೋಗದ ಲಾಭ ಕೊಟ್ಟಿಲ್ಲಾ. ಇದರಿಂದ ಪ್ರತಿ ನೌಕರರಿಗೆ 7 ರಿಂದ 22 ಲಕ್ಷದ ವರೆಗೂ ನಷ್ಟ ಆಗಿದೆ. 23 ಸಾವಿರ ಸರ್ಕಾರಿ ನೌಕರರು 7ನೇ ಆಯೋಗದಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಾ ನಿರತ ನಿವೃತ್ತ ನೌಕರರು ಆರೋಪಿಸಿದ್ದಾರೆ.
ಕೂಡಲೇ ಪರಿಷ್ಕೃತ ಆದೇಶ ಹೊರಡಿಸಬೇಕು ಎಂದು ಪ್ರತಿಭಟನಾ ನಿರತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ರೈತರಿಂದ ಸರಣಿ ಪ್ರತಿಭಟನೆ
ಇನ್ನು ಬೆಳಗಾವಿಯಲ್ಲಿ ಸರಣಿ ಪ್ರತಿಭಟನೆಗಳು ನಡೆದಿವೆ. ಅದರಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದಲೂ ಪ್ರತಿಭಟನೆ ನಡೆಸಲಾಗಿದೆ. ರೈತ ಸಂಘವು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಬೆಳಗಾವಿ ಸುವರ್ಣ ಗಾರ್ಡನ ಬಳಿ ನೂರಾರು ರೈತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಕಬ್ಬು ಬೆಳೆಗೆ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
6,000 ಬೆಲೆ ಘೋಷಣೆ ಮಾಡಲೇಬೇಕು ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದ್ದಾರೆ. ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸಿ ರೈತರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹ ವ್ಯಕ್ತವಾಗಿದೆ. ವಿದ್ಯುತ್ ತೊಂದರೆಯಿಂದ ರೈತರು ಸಂಕಷ್ಟ ಅನುಭವಿಸಿದ್ದಾರೆ. ರೈತರ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಶಿರಸಿಯನ್ನು ಕದಂಬ ಕನ್ನಡ ಜಿಲ್ಲೆಯನ್ನಾಗಿ ಘೋಷಿಸಲು ಆಗ್ರಹ
ಶಿರಸಿಯನ್ನು ಕದಂಬ ಕನ್ನಡ ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗಾವಿಯ ಸುವರ್ಣ ಗಾರ್ಡನ್‌ನಲ್ಲಿ ಈ ಸಂಬಂಧ ಪ್ರತಿಭಟನೆ ನಡೆಸಲಾಗುತ್ತಿದೆ. ರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ಜೋಯಿಡಾ ಹಾಗೂ ದಾಂಡೇಲಿ ಒಳಗೊಂಡಂತೆ ನೂತನ ಜಿಲ್ಲೆಗಾಗಿ ಆಗ್ರಹ ವ್ಯಕ್ತವಾಗಿದೆ. ಅಲ್ಲದೆ ಜಿಲ್ಲೆಯಾದರೆ ಪ್ರತ್ಯೇಕ ಮೆಡಿಕಲ್ ಕಾಲೇಜು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನೀಡಬೇಕು ಎಂದು ಆಗ್ರಹಿಸಲಾಗಿದೆ. ವೈದ್ಯಕೀಯ ಸವಲತ್ತಿಗಾಗಿ 140 ಕಿಲೋಮೀಟರ್ ಕ್ರಮಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕೂಡಲೇ ಶಿರಸಿಯನ್ನು ಜಿಲ್ಲೆ ಮಾಡಿ ಜನರ ಸಮಸ್ಯೆಗೆ ಸ್ಪಂದಿಸುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ.












Click it and Unblock the Notifications