• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಗೆ ಎಂಟು ಲಕ್ಷ ಅನುದಾನ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಮಾರ್ಚ್ 31: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಸಲು ಕಾರ್ಮಿಕ ಇಲಾಖೆಯ ವತಿಯಿಂದ ರೆಡ್ ಕ್ರಾಸ್ ಸಂಸ್ಥೆಗೆ ಎಂಟು ಲಕ್ಷ ರೂಪಾಯಿಯ ಚೆಕ್ ನೀಡಲಾಯಿತು.

ಶಾಸಕ ಅನಿಲ್ ಬೆನಕೆ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರ ಸಮ್ಮುಖದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ರೆಡ್ ಕ್ರಾಸ್ ಸಂಸ್ಥೆಗೆ ಚೆಕ್ ನೀಡಲಾಯಿತು.

ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ಚೆಕ್ ಸ್ವೀಕರಿಸಿದರು. ರೆಡ್‌ ಕ್ರಾಸ್‌ ಸಂಸ್ಥೆಯ ಉಪಾಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಶಾಖೆಯ ಚೇರಮನ್ ಅಶೋಕ ಬಾದಾಮಿ, ಕಾರ್ಯದರ್ಶಿ ಡಾ. ಡಿ.ಎನ್.ಮಿಸಾಳೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ತರನ್ನುಮ್, ಮಲ್ಲಿಕಾರ್ಜುನ ಜೋಗೂರ, ಕಾರ್ಮಿಕ ನಿರೀಕ್ಷಕ ಅನಿಲ್ ಬಗಟಿ ಮತ್ತಿತರರು ಇದ್ದರು.

English summary
Labours department has gave 8 lakhs to mask and sanitizer to workers in belagavi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X