ಕೊರೊನಾ ಸೋಂಕಿತ ಜತೆ ಸಂಪರ್ಕಕ್ಕೆ ಬಂದಿದ್ದ ವೃದ್ಧೆ ಸಾವು
ಬೆಳಗಾವಿ, ಏಪ್ರಿಲ್ 13: ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ, ಕೊರೊನಾ ಸೋಂಕಿತ ರೋಗಿ ಸಂಖ್ಯೆ 224 ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 80 ವರ್ಷದ ವೃದ್ಧೆ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಬೆಳಗಾವಿಯಲ್ಲಿ ನಡೆದಿದೆ.
ಮೃತ ವೃದ್ಧೆಯ ಗಂಟಲು ದ್ರವ ಮಾದರಿ ಪ್ರಯೋಗಾಲಯಕ್ಕೆ ರವಾನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.
ನಿನ್ನೆ ಸಂಜೆ ಹಿರೇಬಾಗೇವಾಡಿಯ ಸೋಂಕಿತ 224ಗೆ ಕೊರೊನಾ ದೃಢವಾಗಿತ್ತು. ಸೋಂಕಿತ 224ನ ಜೊತೆ ಪ್ರಾಥಮಿಕ, ದ್ವಿತೀಯ ಹಂತಕ್ಕೆ ಸಂಪರ್ಕಕ್ಕೆ ಬಂದಿದ್ದ 21 ವ್ಯಕ್ತಿಗಳನ್ನು ಗುರುತಿಸಿ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್‌ನಲ್ಲಿರಿಸುವ ಕಾರ್ಯ ನಡೆದಿತ್ತು. ಈ 21 ವ್ಯಕ್ತಿಗಳ ಪೈಕಿ ಇಂದು ಮೃತಪಟ್ಟ 80 ವರ್ಷದ ವೃದ್ಧೆ ಕೂಡ ಒಬ್ಬರು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿಯ ಪ್ರಕಾರ ವೃದ್ಧೆಯ ಅಂತ್ಯಕ್ರಿಯೆ ಮಾಡಲಾಗುವುದು. ವರದಿ ಬಂದ ಬಳಿಕ ವೃದ್ದೆಗೆ ಕೊರೊನಾ ಸೋಂಕು ಇತ್ತು ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications