ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕರ ವಾಸ್ತವ್ಯಕ್ಕಾಗಿ ಬೆಳಗಾವಿಯಲ್ಲಿ ಹೊಟೆಲ್ ನಿರ್ಮಾಣ?

ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವ ಶಾಸಕರ ಅನುಕೂಲಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಹೊಟೆಲ್ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.

By Prithviraj
|
Google Oneindia Kannada News

ಬೆಳಗಾವಿ, ನವೆಂಬರ್, 24: ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸುವ ಶಾಸಕರಿಗಾಗಿ ಖಾಸಗಿ ಸಹಭಾಗಿತ್ವದಲ್ಲಿ 100 ಕೋಣೆಗಳ ಹೊಟೆಲ್ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿದೆ.

ಎರಡೂ ಸದನಗಳಿಂದ ಒಟ್ಟು 299 ಸದಸ್ಯರಿದ್ದು, ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಲು ಬರುವ ಹಲವು ಶಾಸಕರು ಹುಬ್ಬಳ್ಳಿ ಮತ್ತು ಬೆಳಗಾವಿಯ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಇದಕ್ಕಾಗಿ ಹೆಚ್ಚು ಹಣವನ್ನು ವ್ಯಯಿಸುತ್ತಿದ್ದಾರೆ.

A 100-room hotel for Karnataka legislators during winter sessions?

ಅಷ್ಟೇ ಅಲ್ಲದೆ ಬೆಳಗಾವಿ ಅಧಿವೇಶನದಲ್ಲಿ ಶಾಸಕರ ಹಾಜರಾತಿ ಕೊರತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಸಚಿವಾಲಯ ಸಿಬ್ಬಂದಿ ಮತ್ತು ಮಾಧ್ಯಮ ಸಿಬ್ಬಂದಿಗೂ ಹೊಟೆಲ್ ನಲ್ಲಿ ರೂಮ್ ಗಳನ್ನು ಮೀಸಲಿಡಲು ಸರ್ಕಾರ ಚಿಂತಿಸಿದೆ.

12 ಎಕರೆ ಪ್ರದೇಶದಲ್ಲಿ ಹೋಟೆಲ್ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಹೊಟೆಲ್ ನಿರ್ಮಾಣ ಸಂಸ್ಥೆಯೊಂದರ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

English summary
The Karnataka government is now in talks with a prominent hotelier in Belagavi for the construction of a 100-room hotel, which will be a joint venture.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X