ಹುಷಾರ್... ಯುವತಿಯರ ಪೂರೈಸಿ ಬ್ಲಾಕ್ ಮೇಲ್ ಮಾಡ್ತಾರೆ
ಬೆಳಗಾವಿ, ಫೆ. 12: ಸಮಾಜದ ಪ್ರತಿಷ್ಠಿತ ಸ್ಥಾನದಲ್ಲಿರುವ ಹಲವರು ತಮ್ಮ ಲೈಂಗಿಕ ವಾಂಛೆಯ ಕಾರಣದಿಂದ ಸಾರ್ವಜನಿಕವಾಗಿ ಸಿಕ್ಕಿಬೀಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಇದನ್ನು ಆಧಾರವಾಗಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿರುವ ತಂಡವೊಂದು ನಗರದಲ್ಲಿ ಬೆಳಕಿಗೆ ಬಂದಿದೆ.
ಇವರು ಮೊದಲು ಅತಿಯಾದ ಲೈಂಗಿಕ ವಾಂಛೆ ಉಳ್ಳ ಸಮಾಜದ ಪ್ರತಿಷ್ಠಿತರಿಗೆ ಯುವತಿಯರನ್ನು ಪೂರೈಸುತ್ತಾರೆ. ಅವರ ಲೈಂಗಿಕ ಕ್ರಿಯೆಯನ್ನು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಾರೆ. ನಂತರ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಾರೆ. ಹಣ ನೀಡದಿದ್ದರೆ ಅತ್ಯಾಚಾರದ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡುತ್ತಾರೆ. ಅವರು ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಹಲವು ವಿಡಿಯೋಗಳು ಟಿವಿ ಮಾಧ್ಯಮಗಳಲ್ಲಿ ಪ್ರಸಾರಗೊಂಡಿದೆ. [ನಗ್ನ ಚಿತ್ರ ಹಿಡಿದು ಕಾಡಿದ ಪ್ರೇಮಿ]

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಬಿ.ಆರ್. ರವಿಕಾಂತೇಗೌಡ, "ಇದುವರೆಗೂ ಯಾರೂ ದೂರು ನೀಡಿಲ್ಲ. ಮರ್ಯಾದೆಗೆ ಹೆದರಿ ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲ. ಆದ್ದರಿಂದ ಈಗಾಗಲೇ ಹೊರಬಂದಿರುವ ವಿಡಿಯೋ ಸಾಕ್ಷ್ಯಗಳನ್ನು ಮಾಧ್ಯಮಗಳಿಂದ ಪಡೆದು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು" ಎಂದು ತಿಳಿಸಿದ್ದಾರೆ. [ಕರಾವಳಿಯಲ್ಲಿ ವಿದ್ಯಾರ್ಥಿನಿಯರ ಕಿಡ್ನಾಪ್]
ಈ ಹಿಂದೆ ಮಠಾಧೀಶರೊಬ್ಬರ ಮೇಲೆ ಅತ್ಯಾಚಾರ ಆರೋಪ ಬಂದಿರುವುದರ ಹಿಂದೆಯೂ ಇವರದ್ದೇ ಕೈವಾಡವಿದೆ ಎನ್ನಲಾಗಿದೆ.












Click it and Unblock the Notifications