ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೋದಿಗೆ ಟ್ವೀಟ್ ಮಾಡಿದ ಯುವಕ
ಬೆಳಗಾವಿ, ಆಗಸ್ಟ್ .14: ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಘಟನೆ ನಡೆದಿದೆ.
"ಕಬ್ಬಿನ ಬಾಕಿ ಬಿಲ್ ಕೊಡಿಸಿ, ಇಲ್ಲದಿದ್ದರೆ ನಮ್ಮ ಕುಟುಂಬ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತದೆ" ಎಂದು ಆಕಾಶ ಎಂಬ ಯುವಕ ಟ್ವಿಟ್ಟರ್ ನಲ್ಲಿ ಬೆದರಿಕೆ ಹಾಕಿದ್ದು ಆಕಾಶ 7353 ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಬಾಕಿ ವಸೂಲಿಗೆ ಆಗ್ರಹಿಸಿದ್ದು, ಸಕ್ಕರೆ ಕಾರ್ಖಾನೆಗೆ 28 ಟನ್ ಕಬ್ಬು ಪೂರೈಸಿದ್ರು ಬಿಲ್ ಕೊಟ್ಟಿಲ್ಲ.ಬಾಕಿ ಬಿಲ್ ಬರದ ಕಾರಣ ಕುಟುಂಬ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಆಕಾಶ ಅಳಲು ತೋಡಿಕೊಂಡಿದ್ದಾನೆ.

"ಇದು ನನ್ನ ಕೊನೆ ಮನವಿ. ಬಾಕಿ ಬಿಲ್ ಕೊಡಿಸದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ" ಎಂದು ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಯುವಕನ ಟ್ವೀಟ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಳೆದ ವರ್ಷ ಇದೇ ಸಮಯದಲ್ಲಿ ರೈತನೊಬ್ಬ ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿ, ತನ್ನ ಸಮಸ್ಯೆ ಬಗೆಹರಿಸಿಕೊಂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದ ರೈತ ಜೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಬೇಸತ್ತು, ತಮ್ಮ ಸಮಸ್ಯೆಯನ್ನು ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿದ್ದರು.












Click it and Unblock the Notifications