ಬೆಳಗಾವಿ: ಶಾಲಾ ಬಸ್-ಬೈಕ್ ನಡುವೆ ಡಿಕ್ಕಿ 4 ಸಾವು
ಅಥಣಿ, ಜನವರಿ 18: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಖೋತನಹಟ್ಟಿ ಕ್ರಾಸ್, ಜೇವರ್ಗಿ-ಸಂಕೇಶ್ವರ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಬೈಕ್ ಮತ್ತು ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಮೂವರು ಬೈಕ್ ಸವಾರರ ಪೈಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮೂವರೂ ಬೈಕ್ ಸವಾರರು ಅಥಣಿ ತಾಲ್ಲೂಕಿನ ಯಲಹಡಗಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಶಾಲಾ ವಾಹನದಲ್ಲಿದ್ದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರನ್ನು ಅಥಣಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳು ಐಗಳಿ ಕ್ರಾಸ್ ಮಾಣಿಕ ಪ್ರಭು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications