ಬೆಳಗಾವಿಯ ಸ್ವಾಮೀಜಿ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಂಧನ

ಬೆಳಗಾವಿ, ಮೇ 20: ಬೆಳಗಾವಿ ಜಿಲ್ಲೆಯ ಹೊಸೂರು ಗ್ರಾಮದಲ್ಲಿ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರಗೋಡ ಠಾಣೆ ಪೊಲೀಸರಿಂದ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿ ಎಂಬುವವನನ್ನು ಬಂಧಿಸಲಾಗಿದೆ.

ಹಲ್ಲೆಗೊಳಗಾದ ಗಂಗಾಧರ ಸ್ವಾಮೀಜಿ ಹೊಸೂರಿನ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆರೋಪಿ ಮಲ್ಲಿಕಾರ್ಜುನ ಬುಡಶೆಟ್ಟಿಯು ಮಠಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ.

ಈ ವೇಳೆ ಪ್ರತಿರೋಧ ಒಡ್ಡಿದ ಮಡಿವಾಳೇಶ್ವರ ಮಠದ ಗಂಗಾಧರ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಮಲ್ಲಿಕಾರ್ಜುನ ಬುಡಶೆಟ್ಟಿ ಮೇಲೆ ಹಲವು ಅಪರಾಧ ಪ್ರಕರಣಗಳಿವೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣೆಯ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Accused Arrest For Assault On Swamiji In Belagavi

ಕೊಲೆ ಪ್ರಕರಣವೊಂದರಲ್ಲಿ ಆರೋಪಿ ಮಲ್ಲಿಕಾರ್ಜುನ ಬುಡಶಡಟ್ಟಿ ಜೈಲು ಸೇರಿದ್ದನು. ಇತ್ತೀಚೆಗಷ್ಟೇ ಜಾಮೀನು ಮೇಲೆ ಆರೋಪಿ ಬಿಡುಗಡೆಗೊಂಡಿದ್ದನು. ಸ್ಥಳಕ್ಕೆ ಎಎಸ್ಪಿ ಅಮರನಾಥ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+