ಬಳ್ಳಾರಿ ವಿಭಜನೆ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಳಗಾವಿ. ನವೆಂಬರ್ 26: ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿರುವ ಬೆನ್ನಲ್ಲೇ, ಬೆಳಗಾವಿ ಜಿಲ್ಲೆ ವಿಭಜನೆಗೂ ಕೂಗು ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆಯಾಗಬೇಕು ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಬೆಳಗಾವಿ ವಿಭಜನೆಯ ಕೂಗು ಮತ್ತಷ್ಟು ಗಟ್ಟಿಯಾದರೆ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ.

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಬೆಳಗಾವಿ, ಚಿಕ್ಕೋಡಿ, ಗೋಕಾಕ್ ಮೂರು ಜಿಲ್ಲೆಗಳಾಗುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ ಸತೀಶ್ ಜಾರಕಿಹೊಳಿ, ಬೆಳಗಾವಿಯು 18 ವಿಧಾನಸಭಾ ಕ್ಷೇತ್ರ ಹೊಂದಿರುವ ಬೃಹತ್ ಜಿಲ್ಲೆಯಾಗಿದೆ ಎಂದು ಯಮಕನಮರಡಿ ಶಾಸಕ ತಿಳಿಸಿದರು.

 Belagavi: After Ballari District Bifurcation, Demand Rises For Belagavi District Bifurcation

ಈ ಹಿಂದೆ ಧಾರವಾಡ ಜಿಲ್ಲೆಯನ್ನು ಹೇಗೆ ವಿಭಜನೆ ಮಾಡಲಾಯಿತೋ ಹಾಗೇ ಮಾಡಲಿ, ಬಿಜೆಪಿಯವರೂ ಹಿಂದೆ ವಿಪಕ್ಷದಲ್ಲಿದ್ದಾಗ ಇದರ ಬಗ್ಗೆ ಚರ್ಚೆ ಮಾಡಿರಲಿಲ್ವಾ? ಎಂದು ಸತೀಶ್ ಜಾರಕಿಹೊಳಿ ಕೇಳಿದರು.

ಈ ಹಿಂದೆಯೂ ನಾನು ಸಹ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ, ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+