ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ; ದೇವಾಲಯಗಳಿಗೆ ಭಕ್ತರ ಪ್ರವೇಶ ನಿಷೇಧ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಫೆಬ್ರವರಿ 21; ಮಹಾರಾಷ್ಟ್ರ ರಾಜ್ಯದಲ್ಲಿ ಹೊಸ ಕೋವಿಡ್ ‌ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನಲೆಯಲ್ಲಿ ಬೆಳಗಾವಿಯ ಪ್ರಮುಖ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಪುನಃ ಜಿಲ್ಲಾಡಳಿತ ನಿಷೇಧ ಹೇರಿದೆ.

ಬೆಳಗಾವಿಯ ಪ್ರಸಿದ್ಧ ಸವದತ್ತಿ ಎಲ್ಲಮ್ಮ ಹಾಗೂ ಚಿಂಚಲಿ ಮಾಯವ್ವ ದೇವಾಲಯಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿ ಬೆಳಗಾವಿ ‌ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

ನೆರೆ ರಾಜ್ಯಗಳಲ್ಲಿ ಕೋವಿಡ್ ಅಲೆ: ರಾಜ್ಯದಲ್ಲಿ ಸಮಾರಂಭಗಳ ಮೇಲೆ ನಿರ್ಬಂಧ ಸಾಧ್ಯತೆ! ನೆರೆ ರಾಜ್ಯಗಳಲ್ಲಿ ಕೋವಿಡ್ ಅಲೆ: ರಾಜ್ಯದಲ್ಲಿ ಸಮಾರಂಭಗಳ ಮೇಲೆ ನಿರ್ಬಂಧ ಸಾಧ್ಯತೆ!

ಸವದತ್ತಿಯ ರೇಣುಕಾ ದೇವಿ, ಚಿಂಚಲಿ ಮಾಯಕ್ಕ ದೇವಾಲಯಗಳಿಗೆ ಮಹಾರಾಷ್ಟ್ರದ ರಾಜ್ಯದ ಭಕ್ತರೇ ಹೆಚ್ಚಾಗಿ ಆಗಮಿಸುತ್ತಾರೆ. ಈಗ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ.

ಕೋವಿಡ್ ಹೆಚ್ಚಳ; ಕರ್ನಾಟಕ-ಕೇರಳ ಗಡಿಯಲ್ಲಿ ಹೆಲ್ತ್ ಚೆಕ್ ಪೋಸ್ಟ್ ಕೋವಿಡ್ ಹೆಚ್ಚಳ; ಕರ್ನಾಟಕ-ಕೇರಳ ಗಡಿಯಲ್ಲಿ ಹೆಲ್ತ್ ಚೆಕ್ ಪೋಸ್ಟ್

Sri Renuka Yellamma temple of Savadatti

ಮುಂದಿನ ಆದೇಶದವರೆಗೆ ಯಾವುದೇ ಕಾರಣಕ್ಕೂ ಭಕ್ತರಿಗೆ ದರ್ಶನಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಈ ದೇವಾಲಯಗಳಿಗೆ ಭಕ್ತರ ಭೇಟಿಗೆ ಫೆಬ್ರವರಿ 1ರಿಂದ ಅವಕಾಶ ಕಲ್ಪಿಸಲಾಗಿತ್ತು.

ಸತತ ಎರಡನೆಯ ದಿನವೂ ಏರಿಕೆಯಾದ ಕೋವಿಡ್ ಪ್ರಕರಣಸತತ ಎರಡನೆಯ ದಿನವೂ ಏರಿಕೆಯಾದ ಕೋವಿಡ್ ಪ್ರಕರಣ

ಈಗ ಪುನಃ ಎರಡೂ ದೇವಾಲಯಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ ‌ಜಿಲ್ಲಾಡಳಿತದ ‌ಕ್ರಮದಿಂದ ಭಕ್ತರು ನಿರಾಸೆಗೊಂಡಿದ್ದಾರೆ.

ಶನಿವಾರ ಮಹಾರಾಷ್ಟ್ರ ರಾಜ್ಯದಲ್ಲಿ 6281 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 20,93,913ಕ್ಕೆ ಏರಿಕೆಯಾಗಿದೆ. 48,439 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ 12 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 26,845.

English summary
Belagavi district administration banned devotees for Sri Renuka Yellamma temple of Savadatti and Chinchali Mayavva temple after new COVID cases raised in Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X