ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

25 ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡ್ತಾರೆ : ಕತ್ತಿ

|
Google Oneindia Kannada News

ಬೆಳಗಾವಿ, ಏ. 10 : ಮಾಜಿ ಸಚಿವ ಮತ್ತು ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡದೇ ಹೋದರೆ ಸಿದ್ದರಾಮಯ್ಯ ಸರ್ಕಾರವನ್ನು ಅಸ್ತಿರಗೊಳಿಸುತ್ತೇನೆ, 25 ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡಲು ಸಿದ್ಧವಾಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಬೆಳಗಾವಿಯಲ್ಲಿ ಶುಕ್ರವಾರ ಮಾತನಾಡಿದ ಬಿಜೆಪಿ ನಾಯಕ ಉಮೇಶ್ ಕತ್ತಿ, ಅಭಿವೃದ್ಧಿಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಮೂರು ಭಾಗ ಮಾಡುವ ಸರ್ಕಾರ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯವನ್ನು ಏಕೆ ರಚನೆ ಮಾಡಬಾರದು? ಎಂದು ಪ್ರಶ್ನಿಸಿದರು. [ಪ್ರತ್ಯೇಕ ರಾಜ್ಯ ಕೇಳಿದ ಪಾಟೀಲರಿಗೆ ಶೋಕಾಸ್ ನೋಟಿಸ್]

Umesh Katti

ಸರ್ಕಾರ ತಕ್ಷಣ ವಿಶೇಷ ವಿಧಾನಸಭೆ ಅಧಿವೇಶನ ಕರೆದು, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ನಿರ್ಣಯ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷದ ಶಾಸಕರೇ ಈಗ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಡುತ್ತಿದ್ದಾರೆ. ಸರ್ಕಾರ ಈ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. [ಕರ್ನಾಟಕ ಒಡೆಯುವ ಮಾತನಾಡಿದ ಕತ್ತಿ]

ಸರ್ಕಾರ ಕೆಡವುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದರೆ ಸರ್ಕಾರವನ್ನು ಬೀಳಿಸುತ್ತೇನೆ. 25 ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡಲು ಸಿದ್ಧವಾಗಿದ್ದಾರೆ. ಉತ್ತರ ಕರ್ನಾಟಕ ಭಾಗದ 97 ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಪಾಟೀಲರು ಬೇಡಿಕೆ ಇಟ್ಟಿದ್ದರು : ಎರಡು ದಿನಗಳ ಹಿಂದೆ ವಿಜಯಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರ ಎ.ಎಸ್.ಪಾಟೀಲ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿವೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದ್ದರು ಮತ್ತು ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟಿದ್ದರು.

English summary
Belagavi : Hukkeri MLA and BJP leader Umesh Katti demanded the government to convene a special session to declare separate statehood for the North Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X