ಬೆಳಗಾವಿ ಪಾಲಿಕೆ ಚುನಾವಣೆ ಕಣಕ್ಕಿಳಿಯಲಿದೆ ಎಐಎಂಐಎಂ ಪಕ್ಷ

ಬೆಳಗಾವಿ, ಡಿಸೆಂಬರ್ 25: ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ದೇಶದ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಎಐಎಂಐಎಂ ಪಕ್ಷದ ನಾಯಕರು ಬುಧವಾರ ಬೆಳಗಾವಿಯಲ್ಲಿ ಸಭೆ ಸೇರಿದ್ದರು. ಈ ಸಭೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಗೆ ಸ್ಪರ್ಧಿಸಬೇಕು ಎಂದು ತೀರ್ಮಾನಿಸಲಾಗಿದೆ. ಈ ಮೂಲಕ ಬೆಳಗಾವಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡಲು ಯೋಜನೆ ರೂಪಿಸಲಾಗಿದೆ.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಲತೀಫ್ ಖಾನ್ ಈ ಕುರಿತು ಮಾತನಾಡಿದ್ದಾರೆ. "ರಾಜ್ಯದಲ್ಲಿ ಪಕ್ಷವನ್ನು ಸಂಘಟನೆ ಮಾಡಲು ಮುಂಬರುವ ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳು ವಿವಿಧ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ" ಎಂದು ಹೇಳಿದ್ದಾರೆ.

AIMIM Candidates To Contest For Belagavi City Corporation Election

"ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಯನ್ನು ಮೊಹಮ್ಮದ್ ಸಲೀಂ ನೇತೃತ್ವದಲ್ಲಿ ಸಂಘಟನೆ ಮಾಡಲಾಗುತ್ತದೆ. ಬೆಳಗಾವಿ ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಅಸಾದುದ್ದೀನ್ ಓವೈಸಿ ನೇತೃತ್ವದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ" ಎಂದು ಲತೀಫ್ ಖಾನ್ ತಿಳಿಸಿದ್ದಾರೆ.

ವಿಜಯಪುರ, ಕಲಬುರಗಿ, ಬಳ್ಳಾರಿ, ಹುಬ್ಬಳ್ಳಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸ್ಥಳೀಯ ನಾಯಕರ ಜೊತೆ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣೆಯಲ್ಲಿ ಪೈಪೋಟಿ ನೀಡಲು ಪ್ರಯತ್ನ ಮಾಡಲು ಪಕ್ಷ ತೀರ್ಮಾನಿಸಿದೆ.

ಬೆಳಗಾವಿಯಲ್ಲಿ ವಿವಿಧ ಪಕ್ಷದ ನಾಯಕರು ಎಐಎಂಐಎಂ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಎಲ್ಲಾ ಭಾಷೆಯ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಮೂಲಕ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಗೆಲ್ಲಲು ತಂತ್ರ ರೂಪಿಸಲಾಗುತ್ತದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+