ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಅಧಿವೇಶನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರು ಗೈರು

|
Google Oneindia Kannada News

Recommended Video

Belagavi Winter Session 2018 : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರು ಗೈರು | Oneindia Kannada

ಬೆಳಗಾವಿ, ಡಿಸೆಂಬರ್ 10: ಬೆಳಗಾವಿ ಚಳಿಗಾಲದ ಅಧಿವೇಶನ ಇಂದು( ಡಿ.10)ರಿಂದ ಆರಂಭಗೊಂಡಿದೆ. ಅಧಿವೇಶನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರೇ ಗೈರಾಗಿ ಅಚ್ಚರಿ ಮೂಡಿಸಿದ್ದಾರೆ.

ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಗೈರಾಗಿದ್ದಾರೆ. ಈ ಮೂವರೂ ಇಂದಿನ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ.

ಸರ್ಕಾರದ ಕಣ್ಣು ತೆರೆಸಲು ಪ್ರತಿಭಟನೆ : ಲಕ್ಷಣ್ ಸವದಿ ಸರ್ಕಾರದ ಕಣ್ಣು ತೆರೆಸಲು ಪ್ರತಿಭಟನೆ : ಲಕ್ಷಣ್ ಸವದಿ

ಸಿದ್ದರಾಮಯ್ಯ ಅವರು ಮೊದಲೇ ಹೇಳಿದಂತೆ ಪೂರ್ವ ನಿಯೋಜಿತ ಕಾರ್ಯಕ್ರಮವಿರುವುದರಿಂದ ವಿದೇಶಕ್ಕೆ ತೆರಳಿದ್ದಾರೆ. ಅಧಿವೇಶನ ದಿನಾಂಕ ನಿಗದಿಯಾಗುವ ಮುನ್ನವೇ ವಿದೇಶಕ್ಕೆ ಇಂದೇ ತೆರಳಲು ನಿರ್ಧರಿಸಿದ್ದರು.

All senior Congress leaders absent for winter session

ಉಪಮುಖ್ಯಮಂತ್ರಿ ಪರಮೇಶ್ವರ ತೀವ್ರ ಜ್ವರದಿಂದ ಬಳಲುತ್ತಿದ್ದು, ಗೈರಾಗಿದ್ದಾರೆ. ದಿನೇಶ್ ಗುಂಡೂರಾವ್ ಅವರು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮೂವರು ಪ್ರಮುಖರು ಅಧಿವೇಶನದಲ್ಲಿ ಪಾಲ್ಗೊಳ್ಳದಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬೀಳಲು ಮುಂದಾಗಿದೆ.

10 ದಿನದ ಚಳಿಗಾಲದ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸಿದ್ಧ 10 ದಿನದ ಚಳಿಗಾಲದ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸಿದ್ಧ

ವಸಹಸ್ರಾರು ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ರೈತ ವಿರೋಧಿ, ಜನ ವಿರೋಧಿ ಸರ್ಕಾರ ಎಂದು ಕೂಗಿಕೊಳ್ಳುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮೂವರೇ ಸದನದಲ್ಲಿ ಹಾಜರಿಲ್ಲ ಎಂದು ಆ ಪಕ್ಷದ ಕೆಲವು ಶಾಸಕರು, ಮುಖಂಡರು ಮಾತನಾಡಿಕೊಳ್ಳುತ್ತಿದ್ದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್ಡಿಕೆ! ಏನಿದರ ಮರ್ಮ? ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್ಡಿಕೆ! ಏನಿದರ ಮರ್ಮ?

ಈ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಪೂರ್ವನಿಯೋಜಿತ ಕಾರ್ಯಕ್ರಮದಂತೆ ಸಿದ್ದರಾಮಯ್ಯ, ದಿನೇಶ್‍ಗುಂಡೂರಾವ್ ಅವರು ಪಾಲ್ಗೊಳ್ಳುತ್ತಿಲ್ಲ. ಇನ್ನುಳಿದ ಎಲ್ಲಾ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಎಲ್ಲಾ ಶಾಸಕರ ಜೊತೆ ಇಂದು ಸಭೆ ನಡೆಸಿದ್ದಾರೆ.

English summary
Coordination committee chairman Siddaramaih, Deputy chief minister parameshwar, kpcc president Dinesh Gundurao absent Winter session of first week. This will be new headache for Coalition government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X