• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಹಳೆ ವಿದ್ಯಾರ್ಥಿಗಳ ಸಹಾಯ

|

ಬೆಳಗಾವಿ, ಏ. 22: ಇಡೀ ದೇಶ ಕೊರೊನಾ ವೈರಸ್ ಹೊಡೆತಕ್ಕೆ ತತ್ತರಿಸಿದೆ. ರಾಜ್ಯದಲ್ಲಿ ಕೂಡ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಇನ್ನು ಬೆಳಗಾವಿ ಜಿಲ್ಲೆ ಕೂಡ ಇದಕ್ಕೆ ಹೊರತಾಗಿಲ್ಲ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೆ 3ನೇ ಸ್ಥಾನದಲ್ಲಿದೆ. ಒಟ್ಟು 43 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸೋಂಕಿಗೆ ಈಗಾಗಲೇ ಬಲಿಯಾಗಿದ್ದಾರೆ. ಹೀಗಾಗಿ ಬೆಳಗಾವಿ ಕೊರೊನಾ ಕೆಂಪು ವಲಯದಲ್ಲಿದೆ. ಹೀಗಾಗಿ ಮಹಾಮಾರಿ ಕೊರೊನಾ ನಿಯಂತ್ರಿಸಲು ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರು ಪ್ರಾಣ ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ.

ಕೊರೊನಾ ವೈರಸ್: ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವಾರಿಯರ್ಸ್ ನೆರವಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಎಸ್.ಕೆ. ಪ್ರೌಢಶಾಲೆಯ ಹಳೆ‌ ವಿದ್ಯಾರ್ಥಿಗಳು ಧಾವಿಸಿದ್ದಾರೆ. ಪೊಲೀಸರು ‌ಹಾಗೂ ವೈದ್ಯಕೀಯ ಸಿಬ್ಬಂದಿಗೆ 60 ಸಾವಿರ ರೂ.ಗಳಿಗೂ ಅಧಿಕ ಮೌಲ್ಯದ ರಕ್ಷಣಾ ಸಾಮಗ್ರಿ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಎಸ್.ಕೆ. ಪೌಢಶಾಲೆಯ 2000ನೇ ಸಾಲಿನ ಬ್ಯಾಚ್‌ನ‌ 40 ವಿದ್ಯಾರ್ಥಿಗಳು 20 ವರ್ಷದ ಬಳಿಕ ಒಂದೆಡೆ ಸೇರಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಹುಕ್ಕೇರಿ ಪೊಲೀಸ್ ಠಾಣೆ ಸಿಬ್ಬಂದಿಗೆ ಹಾಗೂ ತಾಲೂಕು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗೆ ಎನ್-95 ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಗೂ ಸ್ಯಾನಿಟೈಸರ್ ವಿತರಿಸಿದ್ದಾರೆ.‌

ಹುಕ್ಕೇರಿ ಹಾಗೂ ಸಂಕೇಶ್ವರ ಪಟ್ಟಣಗಳ ನೈರ್ಮಲ್ಯಕ್ಕೆ‌ ಶ್ರಮಿಸುತ್ತಿರುವ ಪುರಸಭೆಯ ಪೌರಕಾರ್ಮಿಕರಿಗೂ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಗೂ ಸ್ಯಾನಿಟೈಸರ್ ವಿತರಿಸುವುದು ಹಾಗೂ ಪೊಲೀಸ್ ‌ಠಾಣೆ ಮತ್ತು ಆಸ್ಪತ್ರೆ ಎದುರು‌ ಕೇರಳ ಮಾದರಿಯಲ್ಲಿ ಹ್ಯಾಂಡ್ ವಾಷಿಂಗ್ ‌ಸ್ಟೇಷನ್ ಅಳವಡಿಸಲು ‌ಹಳೆ ವಿದ್ಯಾರ್ಥಿಗಳು ಯೋಜನೆ ಹಾಕಿಕೊಂಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 40 ಜನ ಹಳೆ ವಿದ್ಯಾರ್ಥಿಗಳು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ವಂತ ಹಣ ಸೇರಿಸಿ ಕೊರೊನಾ ವಾರಿಯರ್ಸ್‌ ಬೆನ್ನಿಗೆ ನಿಂತಿದ್ದಾರೆ. ಹಳೆ‌ ವಿದ್ಯಾರ್ಥಿಗಳ ಈ ಕಾರ್ಯ ಇತರರಿಗೂ ಮಾದರಿಯಾಗಿದೆ.

English summary
Alumnis behind the Corona Warriors with their own money in the wake of the lockdown. The police have often distributed medical equipment worth more than Rs. 60,000 to the medical staff.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X