ಬೆಳಗಾವಿಯಲ್ಲಿ ಫೆ.20ರಿಂದ ಮೂರು ದಿನ ಸೇನಾ ನೇಮಕಾತಿ
ಬೆಳಗಾವಿ, ಫೆ. 9 : ಬೆಳಗಾವಿಯ ರಾಷ್ಟ್ರೀಯ ಮಿಲಿಟರಿ ಶಾಲೆಯ ಮೈದಾನದಲ್ಲಿ ಫೆ.20 ರಿಂದ 23 ರವರೆಗೆ ವಿವಿಧ ಹುದ್ದೆಗಳ ಭರ್ತಿಗಾಗಿ ಸೇನಾ ನೇಮಕಾತಿ ನಡೆಯಲಿದೆ. ಸೊಲ್ಜರ್ ಜನರಲ್ ಡ್ಯೂಟಿ, ಸೋಲ್ಜರ್ ಟೆಕ್ನಿಕಲ್ ಹಾಗೂ ಸೋಲ್ಜರ್ ಕ್ಲರ್ಕ್/ಸ್ಟೋರ್ ಕೀಫರ್ ಹುದ್ದೆಗಳ ಆಕಾಂಕ್ಷಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ.
ಫೆಬ್ರವರಿ 20 ರಂದು ಸೋಲ್ಜರ್ ಕ್ಲರ್ಕ್/ಸ್ಟೋರ್ ಕೀಫರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳ ವಯೋಮಿತಿ 17 ರಿಂದ 23 ವರ್ಷಗಳು. ಸೋಲ್ಜರ್ ಟೆಕ್ನಿಕಲ್ ಹುದ್ದೆಯ ನೇಮಕಾತಿಗೆ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದು.[ಉದ್ಯೋಗದ ಮಾಹಿತಿಗಾಗಿ ಇಲ್ಲಿ ನೋಡಿ]

ಫೆಬ್ರವರಿ 21 ರಂದು ಸೊಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳ ವಯೋಮಿತಿ 17 ರಿಂದ 21 ವರ್ಷಗಳಾಗಿವೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ಗೋಕಾಕ್ ತಾಲೂಕುಗಳ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದು.
ಫೆಬ್ರವರಿ 22 ರಂದು ಸೊಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ನೇಮಕಾತಿ ನಡೆಯಲಿದ್ದು ಅಭ್ಯರ್ಥಿಗಳ ವಯೋಮಿತಿ 17 ರಿಂದ 21 ವರ್ಷಗಳಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ರಾಯಬಾಗ, ಬೆಳಗಾವಿ, ಸವದತ್ತಿ ತಾಲೂಕುಗಳ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಬಹುದು.
ಫೆಬ್ರವರಿ 23 ರಂದು ಸೊಲ್ಜರ್ ಜನರಲ್ ಡ್ಯೂಟಿ ಹುದ್ದೆಗೆ ನೇಮಕಾತಿ ನಡೆಯಲಿದ್ದು 17 ರಿಂದ 21 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಕಿತ್ತೂರು, ಅಥಣಿ, ಚಿಕ್ಕೋಡಿ ಹಾಗೂ ರಾಮದುರ್ಗ ತಾಲೂಕುಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್‌ಸಿ, ಪಿಯುಸಿ ಹಾಗೂ ಐಟಿಐ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. 12 ಕಲರ್ ಫೋಟೋ, ವಾಸಸ್ಥಳ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮೊದಲಾದ ದಾಖಲೆಗಳೊಂದಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಭರ್ತಿ ಮಾಡಿದ ಅರ್ಜಿಯನ್ನು ಆರ್ಮಿ ರಿಕ್ರೂಯಿಟಿಂಗ್ ಆಫೀಸ್ ಫಾರ್ಟ್, ಬೆಳಗಾವಿ-590016ಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ 0831-2465550 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.












Click it and Unblock the Notifications