ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಸೆಂಬರ್ 13ರಿಂದ ಬೆಳಗಾವಿಯಲ್ಲಿ ಅಧಿವೇಶನ

|
Google Oneindia Kannada News

ಬೆಳಗಾವಿ, ನವೆಂಬರ್ 21; ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಈಗಾಗಲೇ ರಾಜ್ಯಪಾಲರು ಅಧಿವೇಶನ ನಡೆಯುವ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ.

ಭಾನುವಾರ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಕುರಿತು ಮಾಹಿತಿ ನೀಡಿದರು, "ಕರ್ನಾಟಕ ವಿಧಾನಸಭೆ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13ರಿಂದ 24 ರ ತನಕ ನಡೆಯಲಿದೆ" ಎಂದರು.

ಬೆಳಗಾವಿ, ಚಾಮರಾಜನಗರ ಜಿಲ್ಲಾಧಿಕಾರಿಗಳ ವರ್ಗಾವಣೆ ಬೆಳಗಾವಿ, ಚಾಮರಾಜನಗರ ಜಿಲ್ಲಾಧಿಕಾರಿಗಳ ವರ್ಗಾವಣೆ

ಪ್ರವಾಹ ಮತ್ತು ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿರಲಿಲ್ಲ. ಈಗ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.

 ನವೆಂಬರ್ 29 ರಿಂದ ಡಿಸೆಂಬರ್ 23ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಡಿಸೆಂಬರ್ 23ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

Assembly Session At Suvarna Vidhana Soudha From 13 To 24Th December

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲೆ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ರಾಜ್ಯಪಾಲರು ಅಧಿವೇಶನ ನಡೆಸಲು ಅಧಿಸೂಚನೆ ಹೊರಡಿಸಿದ್ದಾರೆ.

 ಮುಂಗಾರು ಅಧಿವೇಶನ; ಮೋದಿ ಸರ್ಕಾರದ ಮುಂದೆ ಟಿಎಂಸಿ ಇಟ್ಟ 7 ಪ್ರಶ್ನೆಗಳು ಮುಂಗಾರು ಅಧಿವೇಶನ; ಮೋದಿ ಸರ್ಕಾರದ ಮುಂದೆ ಟಿಎಂಸಿ ಇಟ್ಟ 7 ಪ್ರಶ್ನೆಗಳು

ಬಿಟ್ ಕಾಯಿನ್ ಪ್ರಕರಣ ಬೆಳಕಿಗೆ ಬಂದ ಬಳಿಕ ಮೊದಲ ಬಾರಿಗೆ ಅಧಿವೇಶನ ನಡೆಯುತ್ತಿದ್ದು, ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರ ರೂಪಿಸುತ್ತಿವೆ. ರಾಜ್ಯದಲ್ಲಿನ ಅಕಾಲಿಕ ಮಳೆ, ರೈತರಿಗೆ ಪರಿಹಾರ ಸೇರಿದಂತೆ ವಿವಿಧ ವಿಚಾರಗಳ ಕುರಿತು ಅಧಿವೇಶನದಲ್ಲಿ ಕಾವೇರಿದ ಚರ್ಚೆ ನಡೆಯಲಿದೆ.

ನವೆಂಬರ್ 17ರಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಚಳಿಗಾಲದ ವಿಧಾನಸಭಾ ಅಧಿವೇಶನದ ಹಿನ್ನಲೆಯಲ್ಲಿ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ನಗರ ಮತ್ತು ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಭೆ ನಡೆಸಿದರು. ಮಾಡಬೇಕಾದ ಬಂದೋಬಸ್ತ್ ವ್ಯವಸ್ಥೆಗಳ ಬಗ್ಗೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಮೊದಲ ಬಾರಿಗೆ ಬೆಳಗಾವಿ ಅಧಿವೇಶವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.

ಚಳಿಗಾಲದ ಅಧಿವೇಶನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ದಿನಾಂಕ ನಿಗದಿ ಮಾಡಿತ್ತು.

English summary
Karnataka assembly session will be held at Suvarna Vidhana Soudha, Belagavi from 13th to 24th December 2021 said speaker Vishweshwara Hegde Kageri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X