ಇಂದಿನಿಂದ ಬೆಳಗಾವಿ ಅಧಿವೇಶನ, 7 ಪ್ರತಿಭಟನೆ
ಬೆಳಗಾವಿ, ನವೆಂಬರ್ 13 : ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶ ಆರಂಭವಾಗಲಿದೆ. ಶಾಸಕರು, ಸಚಿವರ ಆಗಮನದ ಹಿನ್ನಲೆಯಲ್ಲಿ ಭದ್ರತೆಗಾಗಿ 5000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಮುಖ್ಯಮಂತ್ರಿಗಳು, ಶಾಸಕರು, ಅಧಿಕಾರಿಗಳು, ಪೊಲೀಸರ ಊಟ-ವಸತಿಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ. ಮೊದಲ ದಿನದ ಅಧಿವೇಶನಕ್ಕೆ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಇದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 7 ಸಂಘಟನೆಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ.

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆ, ಗೌರಿ ಲಂಕೇಶ್ ಹತ್ಯೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರ ನಾಯಕರ ಮನೆ ಮೇಲೆ ಐಟಿ ದಾಳಿ, ಬೆಂಗಳೂರಿನ ಹದಗೆಟ್ಟ ರಸ್ತೆಗಳು, ವಿದ್ಯುತ್ ಖರೀದಿ ಅವ್ಯವಹಾರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ.












Click it and Unblock the Notifications