ಅಥಣಿ ಉಪ ಚುನಾವಣೆ: ಗೆದ್ದು ಲಕ್ಷ್ಮೀಗೆ ಟಾಂಗ್ ನೀಡುವರೇ ಕುಮಟಳ್ಳಿ..?
ಬೆಳಗಾವಿ, ಡಿಸೆಂಬರ್ 09: ಅಥಣಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಪ್ರತಿ ಮತ ಎಣಿಕೆ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ.
ಡಿಸೆಂಬರ್ 05 ರಂದು ನಡೆದ ಉಪ ಚುನಾವಣೆಗೆ ಇಂದು ಫಲಿತಾಂಶ ಪ್ರಕಟವಾಗುವ ದಿನ. ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಅಥಣಿ ಮತ ಎಣಿಕೆ ಪ್ರಕ್ರಿಯೆ ಇನ್ನು ಕೆಲವೇ ಸುತ್ತುಗಳು ಮಾತ್ರ ಬಾಕಿ ಇವೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಮಹೇಶ್ ಕುಮಟಳ್ಳಿ ಅವರಿಗೆ ಈ ಉಪ ಚುನಾವಣೆಯ ಫಲಿತಾಂಶ ಅತ್ಯಂತ ಪ್ರಮುಖವೆನಿಸಿದೆ. ಬಿಜೆಪಿಯಿಂದ ಮಹೇಶ್ ಕುಮಟಳ್ಳಿ, ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗಿ ಜಿ.ಬಿ.ಮಂಗ್ಸೂಳಿ ಉಪ ಚುನಾವಣಾ ಆಖಾಡದಲ್ಲಿದ್ದಾರೆ. ಗೆಲುವಿನ ಸನಿಹದತ್ತ ಮಹೇಶ್ ಕುಮಟಳ್ಳಿ ಮುನ್ನುಗ್ಗುತ್ತಿದ್ದಾರೆ.

ಇತ್ತೀಚಿನ ವರದಿ ಪ್ರಕಾರ ಅಥಣಿಯಲ್ಲಿ ಬಿಜೆಪಿಯ ಅಭ್ಯರ್ಥಿ ಮಹೇಶ್ ಕುಮಟಳ್ಳಿ 12,366 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ.












Click it and Unblock the Notifications