15 ಕ್ಷೇತ್ರದ ಉಪ ಚುನಾವಣೆ; ಸ್ಪಷ್ಟನೆ ನೀಡಿದ ಜೆಡಿಎಸ್
ಬೆಳಗಾವಿ, ನವೆಂಬರ್ 28 : ಅಥಣಿ ಕ್ಷೇತ್ರದ ಉಪ ಚುನಾವಣೆ ವಿಚಾರದಲ್ಲಿ ಜೆಡಿಎಸ್ ಸ್ಪಷ್ಟನೆಯನ್ನು ನೀಡಿದೆ. ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಪಕ್ಷದ ಬೆಂಬಲಿತ ಅಭ್ಯರ್ಥಿಯಲ್ಲ, ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ ಎಂದು ಹೇಳಿದೆ.
ಡಿಸೆಂಬರ್ 5ರಂದು ಅಥಣಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮಹೇಶ್ ಕುಮಟಳ್ಳಿ, ಕಾಂಗ್ರೆಸ್‌ನಿಂದ ಜಿ. ಬಿ. ಮಂಗ್ಸೂಳಿ ಕಣದಲ್ಲಿದ್ದಾರೆ. ಜೆಡಿಎಸ್ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ.
ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಉಪ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಪ್ರಚಾರವನ್ನು ಮಾಡುತ್ತಿದ್ದಾರೆ. ತಾವು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದ್ದರಿಂದ, ಪಕ್ಷ ಸ್ಪಷ್ಟನೆಯನ್ನು ನೀಡಿದೆ.
ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಹಾಲಳ್ಳಿ ಅಧಿಕಾರ ಸ್ವೀಕಾರ ಮಾಡಿದರು. ಎನ್. ಎಚ್. ಕೋನರೆಡ್ಡಿ ಪಕ್ಷದ ಧ್ವಜ ಮತ್ತು ಆದೇಶಪತ್ರವನ್ನು ನೀಡಿದರು. ಅಥಣಿಯಲ್ಲಿ ಪಕ್ಷದ ಅಭ್ಯರ್ಥಿ ಇಲ್ಲ ಆದರೆ, ಕಾಗವಾಡದಲ್ಲಿ ಶ್ರೀ ಶೈಲ ತುಗಶೆಟ್ಟಿ ಪಕ್ಷದಿಂದ ಕಣದಲ್ಲಿದ್ದಾರೆ.

ವೆಂಕಟರಾವ್ ನಾಡಗೌಡ ಹೇಳಿಕೆ
"ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ರಾಜಕೀಯ ಲಾಭ ಪಡೆಯಲು ನಮ್ಮ ಪಕ್ಷದ ನಾಯಕರ ಭಾವಚಿತ್ರ ಬಳಸಿಕೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ" ಎಂದು ವೆಂಕಟರಾವ್ ನಾಡಗೌಟ ಹೇಳಿದರು.

ಪಕ್ಷದ ಟಿಕೆಟ್ ಕೇಳಿದ್ದರು
"ಶ್ರೀಶೈಲ ಹಳದಮಳ ಜೆಡಿಎಸ್ ಪಕ್ಷದ ಟಿಕೆಟ್ ಕೇಳಿದ್ದರು. ಆದರೆ, ಟಿಕೆಟ್ ಸಿಕ್ಕಲಿಲ್ಲ. ನಾವು ನೈತಿಕ ಬೆಂಬಲ ಘೋಷಣೆ ಮಾಡದಿದ್ದರೂ ನಮ್ಮ ಗಮನಕ್ಕೆ ತರದೇ ಜೆಡಿಎಸ್ ಬೆಂಬಲಿತ ಎಂದು ಹೇಳಿಕೊಂಡಿದ್ದಾರೆ. ಆದ್ದರಿಂದ, ಇದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ" ಎಂದು ಪಕ್ಷ ಹೇಳಿದೆ.

ಪಕ್ಷ ಸಂಘಟನೆ ಮಾಡಲಿದೆ ಜೆಡಿಎಸ್
ಅಥಣಿ ತಾಲೂಕು ಘಟಕದ ಪಕ್ಷದ ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಹಾಲಳ್ಳಿ ನೇಮಕ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಇಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟನೆ ಮಾಡಲಿದ್ದೇವೆ ಎಂದು ಜೆಡಿಎಸ್ ಪಕ್ಷ ಹೇಳಿದೆ.

ಜನತಾ ನ್ಯಾಯಾಲಯದಲ್ಲಿ ಪಾಠ
ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ಎಚ್. ಕೋನರೆಡ್ಡಿ ಮಾತನಾಡಿ, "ಮೈತ್ರಿ ಸರ್ಕಾರದಲ್ಲಿ ಅನೇಕ ಗೊಂದಲಗಳು ಉಂಟಾಗಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರ ತ್ಯಜಿಸಬೇಕಾಯಿತು. ಬಿಜೆಪಿ ಉಪ ಚುನಾವಣೆಯಲ್ಲಿ ಕನಿಷ್ಠ 8 ಸ್ಥಾನದಲ್ಲಿ ಗೆಲ್ಲಲು ಹೊರಟಿದೆ. ಅನರ್ಹ ಶಾಸಕರಿಗೆ ಜನತಾ ನ್ಯಾಯಾಲಯದಲ್ಲಿ ಮತದಾರರು ಪಾಠ ಕಲಿಸಲಿದ್ದಾರೆ" ಎಂದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications