ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

15 ಕ್ಷೇತ್ರದ ಉಪ ಚುನಾವಣೆ; ಸ್ಪಷ್ಟನೆ ನೀಡಿದ ಜೆಡಿಎಸ್

|
Google Oneindia Kannada News

ಬೆಳಗಾವಿ, ನವೆಂಬರ್ 28 : ಅಥಣಿ ಕ್ಷೇತ್ರದ ಉಪ ಚುನಾವಣೆ ವಿಚಾರದಲ್ಲಿ ಜೆಡಿಎಸ್ ಸ್ಪಷ್ಟನೆಯನ್ನು ನೀಡಿದೆ. ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಪಕ್ಷದ ಬೆಂಬಲಿತ ಅಭ್ಯರ್ಥಿಯಲ್ಲ, ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ ಎಂದು ಹೇಳಿದೆ.

ಡಿಸೆಂಬರ್ 5ರಂದು ಅಥಣಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮಹೇಶ್ ಕುಮಟಳ್ಳಿ, ಕಾಂಗ್ರೆಸ್‌ನಿಂದ ಜಿ. ಬಿ. ಮಂಗ್ಸೂಳಿ ಕಣದಲ್ಲಿದ್ದಾರೆ. ಜೆಡಿಎಸ್ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಪಕ್ಷದಿಂದ ಯಾವುದೇ ಅಭ್ಯರ್ಥಿಗೆ ಬೆಂಬಲ ನೀಡಿಲ್ಲ.

ಅಥಣಿ ಕ್ಷೇತ್ರ ಪರಿಚಯ; ಉಪಚುನಾವಣೆಯಲ್ಲಿ ಟಿಕೆಟ್ ಯಾರಿಗೆ?ಅಥಣಿ ಕ್ಷೇತ್ರ ಪರಿಚಯ; ಉಪಚುನಾವಣೆಯಲ್ಲಿ ಟಿಕೆಟ್ ಯಾರಿಗೆ?

ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ಉಪ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಪ್ರಚಾರವನ್ನು ಮಾಡುತ್ತಿದ್ದಾರೆ. ತಾವು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದ್ದರಿಂದ, ಪಕ್ಷ ಸ್ಪಷ್ಟನೆಯನ್ನು ನೀಡಿದೆ.

ಅಥಣಿ ಉಪ ಚುನಾವಣೆ; ಲಕ್ಷ್ಮಣ ಸವದಿಗೆ ಇಲ್ಲ ಬಿಜೆಪಿ ಟಿಕೆಟ್!ಅಥಣಿ ಉಪ ಚುನಾವಣೆ; ಲಕ್ಷ್ಮಣ ಸವದಿಗೆ ಇಲ್ಲ ಬಿಜೆಪಿ ಟಿಕೆಟ್!

ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಹಾಲಳ್ಳಿ ಅಧಿಕಾರ ಸ್ವೀಕಾರ ಮಾಡಿದರು. ಎನ್‌. ಎಚ್. ಕೋನರೆಡ್ಡಿ ಪಕ್ಷದ ಧ್ವಜ ಮತ್ತು ಆದೇಶಪತ್ರವನ್ನು ನೀಡಿದರು. ಅಥಣಿಯಲ್ಲಿ ಪಕ್ಷದ ಅಭ್ಯರ್ಥಿ ಇಲ್ಲ ಆದರೆ, ಕಾಗವಾಡದಲ್ಲಿ ಶ್ರೀ ಶೈಲ ತುಗಶೆಟ್ಟಿ ಪಕ್ಷದಿಂದ ಕಣದಲ್ಲಿದ್ದಾರೆ.

ಕರವೇ ಅಧ್ಯಕ್ಷರನ್ನು ಭೇಟಿ ಮಾಡಿದ ಯಶವಂತಪುರ ಜೆಡಿಎಸ್ ಅಭ್ಯರ್ಥಿ ಕರವೇ ಅಧ್ಯಕ್ಷರನ್ನು ಭೇಟಿ ಮಾಡಿದ ಯಶವಂತಪುರ ಜೆಡಿಎಸ್ ಅಭ್ಯರ್ಥಿ

ವೆಂಕಟರಾವ್ ನಾಡಗೌಡ ಹೇಳಿಕೆ

ವೆಂಕಟರಾವ್ ನಾಡಗೌಡ ಹೇಳಿಕೆ

"ಅಥಣಿ ತಾಲೂಕು ಘಟಕದ ಅಧ್ಯಕ್ಷ ಶ್ರೀಶೈಲ ಹಳದಮಳ ರಾಜಕೀಯ ಲಾಭ ಪಡೆಯಲು ನಮ್ಮ ಪಕ್ಷದ ನಾಯಕರ ಭಾವಚಿತ್ರ ಬಳಸಿಕೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ" ಎಂದು ವೆಂಕಟರಾವ್ ನಾಡಗೌಟ ಹೇಳಿದರು.

ಪಕ್ಷದ ಟಿಕೆಟ್ ಕೇಳಿದ್ದರು

ಪಕ್ಷದ ಟಿಕೆಟ್ ಕೇಳಿದ್ದರು

"ಶ್ರೀಶೈಲ ಹಳದಮಳ ಜೆಡಿಎಸ್ ಪಕ್ಷದ ಟಿಕೆಟ್ ಕೇಳಿದ್ದರು. ಆದರೆ, ಟಿಕೆಟ್ ಸಿಕ್ಕಲಿಲ್ಲ. ನಾವು ನೈತಿಕ ಬೆಂಬಲ ಘೋಷಣೆ ಮಾಡದಿದ್ದರೂ ನಮ್ಮ ಗಮನಕ್ಕೆ ತರದೇ ಜೆಡಿಎಸ್ ಬೆಂಬಲಿತ ಎಂದು ಹೇಳಿಕೊಂಡಿದ್ದಾರೆ. ಆದ್ದರಿಂದ, ಇದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ" ಎಂದು ಪಕ್ಷ ಹೇಳಿದೆ.

ಪಕ್ಷ ಸಂಘಟನೆ ಮಾಡಲಿದೆ ಜೆಡಿಎಸ್

ಪಕ್ಷ ಸಂಘಟನೆ ಮಾಡಲಿದೆ ಜೆಡಿಎಸ್

ಅಥಣಿ ತಾಲೂಕು ಘಟಕದ ಪಕ್ಷದ ನೂತನ ಅಧ್ಯಕ್ಷರಾಗಿ ಅಣ್ಣಾರಾಯ ಹಾಲಳ್ಳಿ ನೇಮಕ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಇಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟನೆ ಮಾಡಲಿದ್ದೇವೆ ಎಂದು ಜೆಡಿಎಸ್ ಪಕ್ಷ ಹೇಳಿದೆ.

ಜನತಾ ನ್ಯಾಯಾಲಯದಲ್ಲಿ ಪಾಠ

ಜನತಾ ನ್ಯಾಯಾಲಯದಲ್ಲಿ ಪಾಠ

ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌. ಎಚ್. ಕೋನರೆಡ್ಡಿ ಮಾತನಾಡಿ, "ಮೈತ್ರಿ ಸರ್ಕಾರದಲ್ಲಿ ಅನೇಕ ಗೊಂದಲಗಳು ಉಂಟಾಗಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರ ತ್ಯಜಿಸಬೇಕಾಯಿತು. ಬಿಜೆಪಿ ಉಪ ಚುನಾವಣೆಯಲ್ಲಿ ಕನಿಷ್ಠ 8 ಸ್ಥಾನದಲ್ಲಿ ಗೆಲ್ಲಲು ಹೊರಟಿದೆ. ಅನರ್ಹ ಶಾಸಕರಿಗೆ ಜನತಾ ನ್ಯಾಯಾಲಯದಲ್ಲಿ ಮತದಾರರು ಪಾಠ ಕಲಿಸಲಿದ್ದಾರೆ" ಎಂದರು.

English summary
JD(S) clarified that party not filed candidate in Athani and not supported any candidate in December 5, 2019 by elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X