ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒನ್ ಟೈಮ್ ಸೆಟ್ಲ್ ಮೆಂಟ್ ಗೆ ಬ್ಯಾಂಕ್-ರೈತರು ಒಪ್ಪಿಗೆ: ಎಚ್ಡಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 08: ಆಕ್ಸಿಸ್ ಬ್ಯಾಂಕ್ ಕೋಲ್ಕೊತ್ತಾದ ನ್ಯಾಯಾಲಯದಲ್ಲಿ ಬೆಳಗಾವಿ ರೈತರ ವಿರುದ್ಧ ಪ್ರಕರಣ ದಾಖಲಿಸಿದ ಬಳಿಕ ರೈತರು ಆತಂಕಗೊಂಡಿದ್ದರು. ಆದರೆ, ಬಗ್ಗೆ ಕರ್ನಾಟಕ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ರೈತರ ಹಿತ ಕಾಪಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರೈತರ ಹಿತಾಸಕ್ತಿ ಕಾಪಾಡಲು ಈ ಎಲ್ಲ ಪ್ರಕ್ರಿಯೆಗಳನ್ನು ಖುದ್ದು ಮೇಲ್ವಿಚಾರಣೆ ನಡೆಸಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಳಗಾವಿ: ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು, ರೈತರ ಮಧ್ಯೆ ಸಂಧಾನ ಸಭೆ ಬೆಳಗಾವಿ: ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು, ರೈತರ ಮಧ್ಯೆ ಸಂಧಾನ ಸಭೆ

ಕುಮಾರಸ್ವಾಮಿ ಅವರ ನಿರ್ದೇಶನದಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಆಕ್ಸಿಸ್ ಬ್ಯಾಂಕ್ ನ ಹಿರಿಯ ಉಪಾಧ್ಯಕ್ಷರು ಹಾಗೂ ರೈತ ಪ್ರತಿನಿಧಿಗಳೊಂದಿಗೆ ನಡೆಸಿದ ಸಂಧಾನ ಸಭೆಯಲ್ಲಿ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

Axis Bank -Farmers agree to one time settlement of loans : HD Kumaraswamy

* ರೈತರ ವಿರುದ್ಧ ಹೂಡಿರುವ ಎಲ್ಲ ಪ್ರಕರಣಗಳನ್ನು ಕೋಲ್ಕೊತ್ತಾದಿಂದ ಸ್ಥಳೀಯ ನ್ಯಾಯಾಲಯಗಳಿಗೆ ವರ್ಗಾಯಿಸಲು ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು ಸಮ್ಮತಿಸಿದರು.

ಸಾಲಮನ್ನಾ ಯೋಜನೆಗೆ ತಂತ್ರಜ್ಞಾನದ ಕಾವಲಿಡಲು ಮುಂದಾದ ಸಿಎಂ ಸಾಲಮನ್ನಾ ಯೋಜನೆಗೆ ತಂತ್ರಜ್ಞಾನದ ಕಾವಲಿಡಲು ಮುಂದಾದ ಸಿಎಂ

* ಆಕ್ಸಿಸ್ ಬ್ಯಾಂಕ್ ದಾಖಲಿಸಿರುವ ಪ್ರಕರಣಗಳಲ್ಲಿ ಸುಮಾರು 25-30 ಪ್ರಕರಣಗಳು ರಾಜ್ಯದ ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಬರುವುದರಿಂದ ಈ ಬಗ್ಗೆ ಕಾನೂನು ಕ್ರಮ ಕೈಬಿಡಲು ಬ್ಯಾಂಕ್ ಅಧಿಕಾರಿಗಳು ಸಮ್ಮತಿಸಿದರು.

* ಟ್ರಾಕ್ಟರ್ ಖರೀದಿ, ಕೃಷಿ ಯಂತ್ರೋಪಕರಣ ಖರೀದಿ, ಜಮೀನು ಅಭಿವೃದ್ಧಿ ಮುಂತಾದ ಉದ್ದೇಶಗಳಿಗೆ ಪಡೆದಿರುವ ಸಾಲಗಳ ಸಂಬಂಧ ಒನ್ ಟೈಮ್ ಸೆಟಲ್ ಮೆಂಟ್ ಗೆ ರೈತರು ಹಾಗೂ ಬ್ಯಾಂಕ್ ಅಧಿಕಾರಿಗಳು ಸಮ್ಮತಿಸಿದರು.

ಸಿದ್ದರಾಮಯ್ಯ ಸರ್ಕಾರದ ಒಂದು ಯೋಜನೆಗೆ ಎಚ್ಡಿಕೆ ಬೀಗ ಹಾಕಿದ್ಯಾಕೆ? ಸಿದ್ದರಾಮಯ್ಯ ಸರ್ಕಾರದ ಒಂದು ಯೋಜನೆಗೆ ಎಚ್ಡಿಕೆ ಬೀಗ ಹಾಕಿದ್ಯಾಕೆ?

* ಈ ಎಲ್ಲ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ನಾಲ್ಕು ತಾಲ್ಲೂಕುಗಳಲ್ಲಿ ಉಪವಿಭಾಗಾಧಿಕಾರಿ ಗಳ ನೇತೃತ್ವದಲ್ಲಿ ಅದಾಲತ್ ನಡೆಸಿ ವಿಲೇವಾರಿ ಮಾಡಲು ತೀರ್ಮಾನಿಸಲಾಯಿತು.

English summary
Axis Bank -Farmers agreed to one time settlement of loans, I have instructed respective DCs of many districts to monitor the issue. Banks can't use coercive method to recover agricultural loans said CM HD Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X