ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ರಾಷ್ಟ್ರಾದ್ಯಂತ ಮುಸ್ಲಿಂ ಸಂಘಟನೆಗಳನ್ನು ನಿಷೇಧಕ್ಕೆ ಆಗ್ರಹ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜನವರಿ 05: ದೀಪಕ್ ರಾವ್ ಹತ್ಯೆ ಖಂಡಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಗುರುವಾರ ರಸ್ತೆ ತಡೆ ನಡೆಸಿ ಉಗ್ರ ಪ್ರತಿಭಟನೆ ನಡೆಸಿದರು.

ಪಟ್ಟಣದ ರಾಯಣ್ಣ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಯುವಕರು, ಮುಖಂಡರು ರಸ್ತೆಗೆ ಅಡ್ಡ ಕುಳಿತು ಎರಡು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪದೇ-ಪದೇ ಹಿಂದೂ ಯುವಕರ ಹತ್ಯೆ ಮಾಡುತ್ತಿರುವ ಮುಸ್ಲಿಂ ಸಂಘಟನೆಗಳನ್ನು ರಾಷ್ಟ್ರಾದ್ಯಂತ ನಿಷೇಧಗೊಳಿಸಬೇಕು. ರಾಜ್ಯದಲ್ಲಿ ಅಶಾಂತಿ ಸೃಷ್ಠಿಸಿ ದುಷ್ಕೃತ್ಯಗಳನ್ನು ನಡೆಸುತ್ತಿರುವ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.

ದೀಪಕ್ ರಾವ್ ಯಾರು? ಕೊಲೆ ಆಗಲು ಕಾರಣವೇನು?ದೀಪಕ್ ರಾವ್ ಯಾರು? ಕೊಲೆ ಆಗಲು ಕಾರಣವೇನು?

ಸಾಮಾನ್ಯ ಬಡ ಕುಟುಂಬದ ಆಧಾರ ಸ್ತಂಭವಾಗಿದ್ದ ದೀಪಕ್ ರಾವ್ ಮೃತ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ಕಲ್ಪಿಸಬೇಕು. ಸಂಘಟಣೆಗಳ ಹೆಸರಿನಲ್ಲಿ ಜಾತಿ, ಜಾತಿಗೆ ಬೆಂಕಿ ಹಚ್ಚಿ ಮೋಜು ನೋಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

Bailhongal Hindu activists protest demanded the arrest of Deepak murder accused

ರಾಜ್ಯಪಾಲರು ಕೂಡಲೇ ಮಧ್ಯಸ್ಥಿಕೆವಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಅಸಿಸ್ಟೆಂಟ್ ಕಮೀಷನರ್ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿ. ಸರ್ಕಾರ, ಮುಸ್ಲಿಂ ಸಂಘಟನೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವೇದಮೂರ್ತಿ ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ, 'ಜಾತಿ, ಮತ, ಬೇದ, ಭಾವ ಎಲ್ಲವನ್ನು ಮರೆತು ಇರುವಂತ ಏಕೈಕ ಧರ್ಮ ಹಿಂದೂ ಧರ್ಮವಾಗಿದೆ.

ಮುಸ್ಲಿಂ ಸಂಘಟನೆಗಳ ಹೆಸರಿಟ್ಟುಕೊಂಡಿರುವ ದುರುಳರು ಪದೇ, ಪದೇ ಅಮಾಯಕ ಹಿಂದು ಯುವಕರನನ್ನು ಬರ್ಬರವಾಗಿ ಹತ್ಯೆ ಮಾಡುತ್ತಿರುವದು ಖಂಡನೀಯವಾಗಿದೆ.

Bailhongal Hindu activists protest demanded the arrest of Deepak murder accused

ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಹಲ್ಲೆಕೋರರನ್ನು ಬಂಧಿಸಿ ಶಿಕ್ಷಿಸದಿದ್ದರೆ ಹತ್ಯೆಗೆ, ಹತ್ಯೆಯೇ ಪ್ರತೀಕಾರವಾಗಲಿದೆ. ಇದೇ ವೇಳೆ ದೇಶದಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧಗೊಳಿಸಬೇಕು' ಎಂದು ಆಗ್ರಹಿಸಿದರು.

English summary
Hindu organizations activists held protest in Bailhongal, Belagavi district on Friday for demanded the arrest of Deepak Rao murder accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X