ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುವರ್ಣಸೌಧ ಎದುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಅಕ್ಟೋಬರ್ 28: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾವಿ ಸುವರ್ಣಸೌಧ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.

ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಂಜೆ 4 ಗಂಟೆಯವರೆಗೆ ಒಂದು ದಿನ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಲಕ್ಷ್ಮಿದೇವಿ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ 2(ಎ) ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರ ಒಬಿಸಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ಮಾಡಲಾಗುತ್ತಿದ್ದು, ಹೋರಾಟದಲ್ಲಿ ಭಾಗವಹಿಸಲು ಲಿಂಗಾಯತ ಪಂಚಮಸಾಲಿ ಸಮುದಾಯದ ಜನಪ್ರತಿನಿಧಿಗಳಿಗೆ ಕರೆ ನೀಡಲಾಗಿದೆ.

Belagavi: Basava Jayamrityunjaya Swamiji Protest On Opposite Suvarna Soudha

ಹಲವು ಜನಪ್ರತಿನಿಧಿಗಳು ಹೋರಾಟದಲ್ಲಿ ಭಾಗಿಯಾಗಲಿದ್ದು, ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಹೋರಾಟದ ವೇದಿಕೆಗೆ ಜಯಮೃತ್ಯುಂಜಯ ಸ್ವಾಮೀಜಿ ಆಗಮಿಸಿದರು.

ಮೆರವಣಿಗೆಯಲ್ಲಿ ಸಾಮಾಜಿಕ ಅಂತರವೇ ಮಾಯಗಿದ್ದು, ಹಲವರು ಮಾಸ್ಕ್ ಧರಿಸದೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ""ಮೀಸಲಾತಿ ಬೇಕೇ ಬೇಕು'' ಅಂತಾ ಘೋಷಣೆ ಕೂಗಿ ಸರ್ಕಾರಕ್ಕೆ ಒತ್ತಾಯಿಸಿದರು.

ಜಗಜ್ಯೋತಿ ಬಸವೇಶ್ವರ ನಾಮಸ್ಮರಣೆ, ವಚನ ಪಠಣ ಮಾಡಲಾಯಿತು. ವಿವಿಧ ಭಾಗಗಳಿಂದ ಸಮಾಜದ ಯುವಕರು ಮೆರವಣಿಗೆ ಮೂಲಕ ಸುವರ್ಣ ಸೌಧಕ್ಕೆ ಆಗಮಿಸಿದ್ದಾರೆ.

Belagavi: Basava Jayamrityunjaya Swamiji Protest On Opposite Suvarna Soudha

ಜಯಮೃತ್ಯುಂಜಯ ಸ್ವಾಮೀಜಿಗಳು ಯುವಕರಿಗೆ ಪುಷ್ಪ ಎರಚಿ ಭರಮಾಡಿಕೊಳ್ಳುತ್ತಿರುವ ದೇಶ್ಯ ಕಂಡುಬಂದಿತು. ಪ್ರತಿಭಟನಾ ಸ್ಥಳಕ್ಕೆ

ಸಂಜೆ ೪ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಪ್ರತಿಭಟನಾಕಾರರ ಅಹವಾಲನ್ನು ಆಲಿಸಲಿದ್ದಾರೆ.

English summary
Under the leadership of Basava Jayamrityunjaya Swamiji, has begin Protest in Belagavi, demanding reservation for the Lingayat Panchamasaali community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X