ಪ್ರಿಯಕರನ ಜತೆ ಸುತ್ತಾಡಲು ಹೋಗಿದ್ದ ಅಪ್ರಾಪ್ತೆ ಮೇಲೆ ಬೆಳಗಾವಿಯಲ್ಲಿ ಗ್ಯಾಂಗ್ ರೇಪ್

ಪ್ರಿಯಕರನ ಜತೆ ಸುತ್ತಾಡಲು ಹೋಗಿದ್ದ 17 ವರ್ಷದ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಬೆಳಗಾವಿಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ, ಫೆಬ್ರವರಿ 21: ಪ್ರಿಯಕರನ ಜತೆ ಸುತ್ತಾಡಲು ಹೋಗಿದ್ದ 17 ವರ್ಷದ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಬೆಳಗಾವಿಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಫೆಬ್ರವರಿ 15 ರಂದು ನಡೆದಿದ್ದ ಈ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಫೆಬ್ರವರಿ 15ರಂದು ಗಳೆಯನ ಜತೆ ಯುವತಿ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಸುತ್ತಾಡಲು ಹೋಗಿದ್ದಳು. ಈ ವೇಳೆ ಐದು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದೆ.[ಶಿವಮೊಗ್ಗ: ಪಿಯು ವಿದ್ಯಾರ್ಥಿನಿ ಮೇಲೆ 6 ಮಂದಿ ಗ್ಯಾಂಗ್ ರೇಪ್]

 Belagavi: 4 arrested in minor gang rape case

ಘಟನೆ ನಂತರ ಯುವತಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಗೆ ಡಿಸಿಪಿ ಜಿ. ರಾಧಿಕಾ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.['ರೇಪ್ ಮಾಡುವ ಮುನ್ನ ಈಕೆಯ ವಿಡಿಯೋ ನೋಡಿ']

ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+