ಬೆಳಗಾವಿ-ಬೆಂಗಳೂರು ವಿಶೇಷ ರೈಲು : ನಿಲ್ದಾಣ, ವೇಳಾಪಟ್ಟಿ

ಬೆಳಗಾವಿ, ಜೂನ್ 27 : ಬೆಳಗಾವಿ-ಬೆಂಗಳೂರು ನಗರದ ನಡುವಿನ ವಿಶೇಷ ರೈಲಿಗೆ ಜೂನ್ 29ರಂದು ಚಾಲನೆ ಸಿಗಲಿದೆ. ಒಂದು ತಿಂಗಳ ಕಾಲ ಉಭಯ ನಗರಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ.

ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು ಜೂನ್ 29ರಂದು ಸಂಜೆ 6 ಗಂಟೆಗೆ ವಿಶೇಷ ತತ್ಕಾಲ್ ಸೂಪರ್ ಫಾಸ್ಟ್ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬೆಳಗಾವಿ-ಬೆಂಗಳೂರು ನಡುವೆ 06525/06526 ನಂಬರ್ ರೈಲು ಸಂಚರಿಸಲಿದೆ.

ನೈಋತ್ಯ ರೈಲ್ವೆ 30/6/2019 ರಿಂದ 29/7/2019 ಅಂದರೆ ಒಂದು ತಿಂಗಳ ಕಾಲ ಮಾತ್ರ ರೈಲು ಬೆಳಗಾವಿ-ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ತನಕ ಸಂಚಾರ ನಡೆಸಲಿದೆ ಎಂದು ಹೇಳಿದೆ. ಪ್ರಯಾಣದರ 175 ರಿಂದ 400 ರೂ. ತನಕ ಇರಲಿದೆ.

Belagavi-Bengaluru special train form June 29

ನಿಲ್ದಾಣಗಳು : 14 ಬೋಗಿಗಳ ರೈಲು ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ಸೌತ್, ದಾವಣಗೆರೆ, ಅರಸೀಕೆರೆ, ತುಮಕೂರು, ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿದ್ದು ಬಳಿಕ ಕಾಂತಿವೀರ ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣ ತಲುಪಲಿದೆ.

ರೈಲಿನಲ್ಲಿ ಪ್ರಯಾಣ ಮಾಡಲು ನಿಲ್ದಾಣದ ಟಿಕೆಟ್ ಕೌಂಟರ್ ಮತ್ತು ಆನ್‌ಲೈನ್ ಮೂಲಕವೂ ಟಿಕೆಟ್ ಬುಕ್ ಮಾಡಬಹುದಾಗಿದೆ. ತತ್ಕಾಲ್ ವಿಶೇಷ ರೈಲಿನಲ್ಲಿ ಪ್ರಯಾಣಿಸಲು ಕನಿಷ್ಠ 10 ದಿನ ಮೊದಲು ಟಿಕೆಟ್ ಬುಕ್ ಮಾಡಬಹುದಾಗಿದೆ.

ವೇಳಾಪಟ್ಟಿ : ಪ್ರತಿದಿನ ರಾತ್ರಿ 9 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಡುವ ರೈಲು ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರಾತ್ರಿ 9 ಗಂಟೆಗೆ ಹೊರಡುವ ರೈಲು ಮರುದಿನ ಬೆಳಗ್ಗೆ 7.30ಕ್ಕೆ ಬೆಂಗಳೂರು ತಲುಪಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+