ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ನ.1 ರಿಂದ ಕಾಯಂ
ಬೆಳಗಾವಿ, ಆಗಸ್ಟ್ 18 : ಬೆಳಗಾವಿಯ ಜನರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಬೆಳಗಾವಿ-ಬೆಂಗಳೂರು ನಡುವಿನ ಸೂಪರ್ ಫಾಸ್ಟ್ ರೈಲು ನವೆಂಬರ್ 1 ರಿಂದ ಕಾಯಂ ಆಗಿ ಸಂಚಾರ ನಡೆಸಲಿದೆ.
ಜೂನ್ 29ರಂದು ಆರಂಭವಾದ ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ತಿಂಗಳ ಪ್ರಾಯೋಗಿಕವಾಗಿದ್ದ ರೈಲನ್ನು ಈಗ ಅಕ್ಟೋಬರ್ ಅಂತ್ಯದ ತನಕ ವಿಸ್ತರಣೆ ಮಾಡಲಾಗಿದೆ.
ನವೆಂಬರ್ 1 ರಿಂದ ಈ ರೈಲನ್ನು ಕಾಯಂಗೊಳಿಸಲು ನೈಋತ್ಯ ರೈಲ್ವೆ ತೀರ್ಮಾನ ಕೈಗೊಂಡಿದೆ. ಶೀಘ್ರದಲ್ಲಿಯೇ ಈ ಕುರಿತು ಆದೇಶ ಪ್ರಕಟವಾಗಲಿದೆ. ಇದರಿಂದಾಗಿ ಬೆಂಗಳೂರು-ಬೆಳಗಾವಿ ಮಾರ್ಗದಲ್ಲಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಸಹಾಯಕವಾಗಲಿದೆ.

ಜೂನ್ 29ರಂದು ರೈಲು ಸೇವೆ ಆರಂಭವಾದಾಗ 14 ಬೋಗಿ ಇತ್ತು. ಪ್ರತಿದಿನ ಹೆಚ್ಚಿನ ಸೀಟುಗಳಿಗೆ ಬೇಡಿಕೆ ಬರುತ್ತಿತ್ತು. ಆದ್ದರಿಂದ, ಹೆಚ್ಚುವರಿಯಾಗಿ ಫಸ್ಟ್ ಕ್ಲಾಸ್ ಎಸಿ ಕೋಚ್ ಅಳವಡಿಕೆ ಮಾಡಿ 15 ಬೋಗಿಯನ್ನು ಮಾಡಲಾಗಿತ್ತು.
ಈಗ ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ 15 ಕೋಚ್‌ಗಳಿದ್ದು, 868 ಸೀಟುಗಳು ಲಭ್ಯವಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನರಿಗೆ ಈ ರೈಲಿನಿಂದ ಬಹಳಷ್ಟು ಅನುಕೂಲವಾಗಿದೆ.
ಬೆಳಗಾವಿ-ಬೆಂಗಳೂರು ನಡುವಿನ ಸುಮಾರು 610 ಕಿ. ಮೀ. ದೂರವನ್ನು ಈ ರೈಲು 10 ಗಂಟೆಗಳಲ್ಲಿ ಕ್ರಮಿಸಲಿದೆ. ಆದ್ದರಿಂದ ಜನರು ಬಸ್‌ಗಳಿಗಿಂತ ಈ ರೈಲಿನ ಕಡೆಗೆ ಹೆಚ್ಚು ಆಕರ್ಷಿತರಾಗಿದ್ದಾರೆ.
ಬೆಳಗಾವಿಯಿಂದ ಹೊರಡುವ ರೈಲು ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಅರಸೀಕೆರೆ, ತುಮಕೂರು, ಯಶವಂತಪುರ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣಕ್ಕೆ ಆಗಮಿಸುತ್ತದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್












Click it and Unblock the Notifications