ಬೆಳಗಾವಿಯಲ್ಲಿ ಭೀಕರ ಅಪಘಾತ, ಬಿಜೆಪಿ ಮುಖಂಡ ಸಾವು

ಬೆಳಗಾವಿ, ಡಿಸೆಂಬರ್ 01 : ಖಾನಪುರ ತಾಲೂಕಿನ ನಂದಗಡ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮರಕ್ಕೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಧರ್ಮಸ್ಥಳದಿಂದ ಬೆಳಗಾವಿಗೆ ವಾಪಸ್ ಆಗುವಾಗ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

accident

ಮೃತರನ್ನು ಬಿಜೆಪಿ ಮುಖಂಡ ಮಹಾಂತೇಶ್ ಅಂಗಡಿ, ಸದಾನಂದ ಹಿರೇಮಠ್, ಬಸವರಾಜ್ ಮಗದುಮ್ ಎಂದು ಗುರುತಿಸಲಾಗಿದೆ. ಗೋಕಾಕ್ ತಾಲೂಕಿನವರಾದ ಮಹಾಂತೇಶ್ ಅಂಗಡಿ ಬಿಜೆಪಿ ಮುಖಂಡರಾಗಿದ್ದರು ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು.

ಜಖಂಗೊಂಡ ಕಾರು : ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ನಡೆದರೂ 5.30ರ ತನಕ ಯಾರೂ ಅದನ್ನು ಗಮನಿಸಿರಲಿಲ್ಲ. 5.30ರ ಸುಮಾರಿಗೆ ವಾಹನ ಸವಾರರೊಬ್ಬರು ಈ ಕುರಿತು ನಂದಗಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.

ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಕಾರಿನಲ್ಲಿ ಸಿಲುಕಿದ್ದ ಶವಗಳನ್ನು ಹೊರತೆಯಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+