Belagavi: ರಜೆ ಕೊಡದ್ದಕ್ಕೆ ಬೆನ್ನು ನೋವಿನಿಂದ ಬಳಲುತ್ತಿದ್ದ ಚಾಲಕ ಬಸ್ಸಿನಲ್ಲಿಯೇ ನೇಣಿಗೆ ಶರಣು- ಕುಟುಂಬಸ್ಥರ ಆಕ್ರಂದನ
ಬೆಳಗಾವಿ ಏಪ್ರಿಲ್ 2: ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವ ಚಾಲಕರಿಗೆ ಇತ್ತೀಚೆಗೆ ನೆಮ್ಮದಿಯಿಲ್ಲದಂತಾಗಿದೆ. ವಿಶ್ರಾಂತಿ ಇಲ್ಲದಂತೆ ಬಸ್ ಚಾಲನೆ ಮಾಡುವುದು ಕಷ್ಟವಾಗುತ್ತಿದೆ. ಬೆನ್ನು, ಕಾಲು ಹೀಗೆ ನಾನಾ ಆರೋಗ್ಯ ಸಮಸ್ಯೆಗಳನ್ನು ಎದರಿಸುವಂತಾಗಿದೆ. ಅಲ್ಲದೆ ಕುಟುಂಬಸ್ಥರೊಂದಿಗೆ ನೆಮ್ಮದಿಯಾಗಿ ಇರಲು ಆಗದಂತಹ ಸ್ಥಿತಿ ಇದೆ. ರಜೆಗಳನ್ನು ಕೇಳಿದರೆ ರಜೆ ನೀಡದೆ ಸತಾಯಿಸುವಂತಹ ಮೇಲಾಧಿಕರಿಗಳ ದೌರ್ಜನ್ಯಕ್ಕೆ ಬೇಸತ್ತು ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು ಬೆಳಗಾವಿಯಲ್ಲಿ ಬಸ್ ಚಾಲಕರೊಬ್ಬರು ಬಸ್ಸಿನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯ ಡಿಪೋದ ಎರಡನೇ ಘಟಕದಲ್ಲಿ ಈ ಘಟನೆ ನಡೆದಿದೆ. ಎರಡನೇ ಘಟಕದ ಬಸ್ ಚಾಲಕ ಬಾಲಚಂದ್ರ ಹುಕೋಜಿ ನೇಣಿಗೆ ಶರಣಾದ ಚಾಲಕ. ನಿರಂತರ ಬೆನ್ನು ನೋವುನಿಂದ ಬಳಲುತ್ತಿದ್ದ ವಾಲಚಂದ್ರ ಅವರು ಮನೆಯಲ್ಲಿ ಅಕ್ಕನ ಮದುವೆಗೆ ರಜೆಯನ್ನು ಕೇಳಿದ್ದರು.

ಅಕ್ಕನ ಮಗಳ ಮದುವೆ ಇದ್ದ ಕಾರಣ ಮೂರು ದಿನಗಳ ಹಿಂದೆ ರಜೆಗಾಗಿ ಅರ್ಜಿ ಸಲ್ಲಿಸಿದ್ದರು. ರಜೆ ನೀಡದ ಹಿನ್ನೆಲೆಯಲ್ಲಿ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್‌ನಲ್ಲ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಅವರಿಗೆ ರಜೆ ಬೇಕಿತ್ತು. ರಜೆ ಸಿಗದ ಬೆನ್ನಲ್ಲೆ ಬೆಳಿಗ್ಗೆ ಆರು ಗಂಟೆಗೆ ಕೆಲಸಕ್ಕೆ ಹಾಜರಾಗಿದ್ದರು. ಗಾಂಧಿ ನಗರದಲ್ಲಿ ವಾಸವಾಗಿದ್ದ ಚಾಲಕ ರಾಮಚಂದ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು ಎಂದು ಗೊತ್ತಾಗಿದೆ. ಬಾಲಚಂದ್ರ ಸಾವಿಗೆ ಅಧಿಕಾರಿಗಳಿಏ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ. ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
ಮನೆಗೆ ಆಸರೆಯಾಗಿದ್ದ ಮನೆ ಯಜಮಾನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನ್ಯಾಯಕ್ಕಾಗಿ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
ಯತ್ನಾಳ್ ಬಿಜೆಪಿಗೆ ಬರಲೇಬೇಕು ಹೊಸ ಪಕ್ಷ ಕಟ್ಟಲು ಸಾಧ್ಯವಿಲ್ಲ- ರಮೇಶ್ ಜಾರಕಿಹೊಳಿ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ಪಕ್ಷದಿಂದ ಉಚ್ಛಾಟನೆಯಾದ ಬಳಿಕ ಹೊಸ ಪಕ್ಷ ಕಟ್ಟುವುದಾಗಿ ಹೇಳಿಕೆಯನ್ನು ನೀಡಿದ್ದಾರೆ. ಆದರೆ 'ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಬಿಜೆಪಿಗೆ ಮರಳುತ್ತಾರೆ ಅವರು ಹೊಸ ಪಕ್ಷ ಕಟ್ಟಲು ಆಗಲ್ಲ. ನಾವು ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ' ಎಂದು ಶಾಸಕ ರಮೆಶ್ ಜಾರಕಿಹೊಳಿ ಹೇಳಿದ್ದಾರೆ. 'ಪಕ್ಷ ಮುಜುಗರಕ್ಕೆ ಒಳಗಾಗುವಂತೆ ಮಾತನಾಡಬಾರದೆಂದು ಉತ್ನಾಳರಿಗೆ ಕೋರಿದ್ದೇನೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ್ದೇವೆ. ಎಲ್ಲವನ್ನೂ ಮಾಧ್ಯಮಕ್ಕೆ ಹೇಲಲು ಆಗದು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಯತ್ನಾಳ್ ವಿಚಾರದಲ್ಲಿ ಕೆಲವರು ಈಗ ಮನಬಂದಂತೆ ಮಾತನಾಡುತ್ತಿದ್ದಾರೆ. ಈ ಹಿಂದೆ ಅವರೇ ಯತ್ನಾಳ್ ಅವರನ್ನು ಅಣ್ಣ, ಚಿಕ್ಕಪ್ಪ, ಮುಂದಿನ ಸಿಎಂ ಎಂದು ಮಾತನಾಡುತ್ತಾ ಓಡಾಡಿಕೊಂಡಿದ್ದವರು. ಈಗ ಉಲ್ಟಾ ಮಾತನಾಡುತ್ತಿದ್ದಾರೆ' ಎಂದು ಕಿಡಿ ಕಾರಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications