• search
 • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ: ಎಂ‌.ತಿಮ್ಮಾಪುರ ಗ್ರಾಮದಲ್ಲಿ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಅಕ್ಟೋಬರ್ 9: ಬೆಳಗಾವಿ ಜಿಲ್ಲೆಯ ಎಂ‌.ತಿಮ್ಮಾಪುರ ಗ್ರಾಮದಲ್ಲಿ 23 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪಾಸಿಟಿವ್ ಕಂಡುಬಂದಿರುವ ವಿಚಾರವಾಗಿ ಸ್ಥಳೀಯ ಜನರು ಭಯಭೀತರಾಗಿದ್ದಾರೆ.

ಶಿಕ್ಷಕರು ಗ್ರಾಮಕ್ಕೆ ತೆರಳಿ ಪಾಠ ಮಾಡುವುದು ವಿದ್ಯಾಗಮ ಯೋಜನೆಯ ಗುರಿಯಾಗಿದ್ದು, ಈ ಸಂದರ್ಭದಲ್ಲಿ 23 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ 68 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ‌.ತಿಮ್ಮಾಪುರ ಗ್ರಾಮದಲ್ಲಿ ಓದುತ್ತಿದ್ದ 191 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಅವರ ಪ್ರಾಥಮಿಕ ಸಂಪರ್ಕ ವ್ಯಾಪ್ತಿಗೆ 168 ವಿದ್ಯಾರ್ಥಿಗಳು ಬಂದಿದ್ದಾರೆ ಎನ್ನಲಾಗಿದೆ. ಇದರಿಂದ ಎಂ.ತಿಮ್ಮಾಪುರ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಅದೇ ರೀತಿ ಈ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದ 6 ಜನ ಶಿಕ್ಷಕರಿಗೂ ಕೊರೊನಾ ಸೋಂಕು ತಗುಲುವ ಸಂಭವವಿದೆ. ಸೋಂಕಿತ 23 ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಈ ಬೆಳವಣಿಗೆಯಿಂದ ಎಂ.ತಿಮ್ಮಾಪುರ ಗ್ರಾಮದಿಂದ ಸರ್ಕಾರಿ ಶಾಲೆ ಶಿಕ್ಷಕರನ್ನು ಗ್ರಾಮಸ್ಥರು ಹೊರ ಹಾಕಿದ್ದು, ಶಿಕ್ಷಕರು ಸೇರಿದಂತೆ ಗ್ರಾಮಕ್ಕೆ ಯಾರು ಪ್ರವೇಶಿಸದಂತೆ ಗ್ರಾಮಸ್ಥರು ನಿಷೇಧ ಹೇರಿದ್ದಾರೆ.

   RR Nagar ByElection : ಕುಮಾರಣ್ಣ ಸ್ಪಷ್ಟವಾಗಿ ಹೇಳಿದರು | Oneindia Kannada

   English summary
   Indigenous people are horrified at the sight of a coronavirus positive for 23 students in M. Thimmapura village in Belagavi district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X